ಶಹಾಬಾದ್: ಉತ್ತರಿ ಮಳೆಯ ಕೂರಗಿ ಪೂಜೆ ಮತು ಬಸವ ರೈತ ಸಂಘದ ಉದ್ಘಾಟನೆಯನ್ನು ಶಾಸಕ ಬಸವರಾಜ ಮತ್ತಿಮಡು ಅವರು ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮಾಡುವ ಮೂಲಕ ಉದ್ಘಾಟಿಸಿದರು.
ನಗರದ ಬಸವೇಶ್ವರ ವೃತ್ತದಿಂದ ದಾದಾ ಪೀರ ದರ್ಗಾ ತೊನಸನಹಳ್ಳಿ ರೋಡಿನವರೆಗೆ ಎತ್ತಿನ ಬಂಡಿ ಮತ್ತು ಟ್ರ್ಯಾಕ್ಟರ್‌ಗಳೊಂದಿಗೆ ಬೃಹತ್ ಮೆರವಣಿಗೆ ಮಾಡಿ ಸಂಭ್ರಮದಿಂದ ಆಚರಿಸಿದರು.
ರೈತರ ಕೆಲವು ಬಹುದಿನಗಳ ಬೇಡಿಕೆಗಳನ್ನು ಈಡೇರಿಸಲು ಸಂಘದ ಪದಾಧಿಕಾರಿಗಳು ಶಾಸಕರಿಗೆ ಮನವಿ ಮಾಡಿಕೊಂಡರು. ಮನವಿಗೆ ಸ್ಪಂದಿಸಿದ ಶಾಸಕರು, ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದಾರೆ ಎಂದು ಬಸವ ರೈತ ಸಂಘದ ಅಧ್ಯಕ್ಷ ತಿರುಮಲ ದೇವಕರ ಮತ್ತು ಪ್ರಧಾನ ಕಾರ್ಯದರ್ಶಿ ಸದಾನಂದ ಕುಂಬಾರ ಹೇಳಿದರು.