ಚಿಂಚೋಳಿ: ತಾಲ್ಲೂಕಿನ ಕನಕಪುರ ಗ್ರಾಮದಲ್ಲಿ ಸಾಲಬಾಧೆಯಿಂದ ರೈತ ಮಲ್ಲೇಶಪ್ಪ ಕಲ್ಲಪ್ಪ(65) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
‘ಅತಿವೃಷ್ಟಿ ಅನಾವೃಷ್ಟಿಯಿಂದ ಮುಂಗಾರು ಏರುಪೇರಾಗಿದ್ದು, ಬೆಳೆ ಕೈಕೊಟ್ಟಿದ್ದರಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಷ ಸೇವಿಸಿ ಅಸ್ವಸ್ಥರಾಗಿದ್ದ ಅವರನ್ನು ಕಲಬುರಗಿಯ ಜಿಮ್ಸ್‌ಗೆ ದಾಖಲಿಸಲಾಗಿತ್ತು. ಆದರೆ ಭಾನುವಾರ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ’ ಎಂದು ಗ್ರಾಮದ ಹಣಮಂತರಾವ್ ದೇಶಪಾಂಡೆ ತಿಳಿಸಿದ್ದಾರೆ.
ಚಿಂಚೋಳಿ ಠಾಣೆ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಪುತ್ರ ಕಲ್ಲಪ್ಪ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಇದ್ದಾರೆ. ಕೆಜಿಬಿ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಖಾಸಗಿ ಸಾಲ ಹೊಂದಿದ್ದರು ಎಂದು ತಿಳಿದುಬಂದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.