ಭಾನುವಾರ, ಮೇ 29, 2022
23 °C

ಮದಗುಣಕಿ: ವಿಷ ಸೇವಿಸಿ ರೈತ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆಳಂದ: ತಾಲ್ಲೂಕಿನ ಮದುಗುಣಕಿ ಗ್ರಾಮದಲ್ಲಿ ಸೋಮವಾರ  ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೇವಪ್ಪ ಶಿವರಾಚಪ್ಪ ಸಣಮನಿ (50) ಮೃತಪಟ್ಟವರು.ಅವರಿಗೆ ಪತ್ನಿ, ಪುತ್ರಿ ಹಾಗೂ ಇಬ್ಬರು ಪುತ್ರರು ಇದ್ದಾರೆ.

ಮದುವೆ ಮತ್ತಿತರ ಕೌಟುಂಬಿಕ ಕಾರಣಗಳಿಗಾಗಿ ತಮ್ಮ 6 ಎಕರೆ ಜಮೀನಿನಲ್ಲಿ 5 ಎಕರೆ ಜಮೀನು ಮಾರಾಟ ಮಾಡಿದ್ದರು. ಗ್ರಾಮದ ಭಾರತೀಯ ಸ್ಟೇಟ್ ಬ್ಯಾಂಕ್‌ ಶಾಖೆಯಲ್ಲಿ ₹2 ಲಕ್ಷ ಹಾಗೂ ಖಾಸಗಿ ಲೇವಾದೇವಿಗಾರರ ಬಳಿ ₹5 ಲಕ್ಷ ಸಾಲ ಮಾಡಿದ್ದರು. ಸಾಲಬಾಧೆ ಹಾಗೂ ಆರ್ಥಿಕ ಸಮಸ್ಯೆಯಿಂದ ನೊಂದು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮಾದನ ಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.