ಸೋಮವಾರ, ಏಪ್ರಿಲ್ 19, 2021
31 °C

ಕಲಬುರ್ಗಿ: ಬೆಳೆ ನಾಶ, ₹ 25 ಸಾವಿರ ಪರಿಹಾರಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ‘ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಮುಂಗರಿನ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರತಿ ಎಕರೆಗೆ ₹ 25 ಸಾವಿರ ಪರಿಹಾರ ಘೋಷಿಸಬೇಕು’ ಎಂದು ಜೆಡಿಎಸ್‌ ಜಿಲ್ಲಾ ಘಟಕದ ರೈತ ವಿಭಾಗದ ಅಧ್ಯಕ್ಷ ಭೀಮರಾಯ ನಾಟೀಕಾರ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

‘ಒಂದೆಡೆ ಬೆಳೆ ನಾಶ ಇನ್ನೊಂದೆಡೆ ಕೋವಿಡ್ ಸಂಕಷ್ಟದಿಂದ ರೈತರು ಕಂಗಾಲಾಗಿದ್ದಾರೆ. ಜೀವನ ಸಾಗಿಸಲು ಬಹಳಷ್ಟು ಕಷ್ಟದಲ್ಲಿದ್ದು, ಅವರಿಗೆ ಸರ್ಕಾರದಿಂದ ₹ 5 ಲಕ್ಷದವರಗೆ ಬಡ್ಡಿರಹಿತವಾಗಿ ಸಾಲ ಒದಗಿಸಬೇಕು’ ಎಂದು ಅವರು ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆಗಳುಳಿಗೆ ತಿದ್ದುಪಡಿ ತರುವ ಮೂಲಕ ಜನರಿಗೆ ಅನ್ಯಾಯ ಮಾಡುತ್ತಿದೆ. ಸ್ವತಃ ಪ್ರಜೆಗಳಿಗೇ ಬೇಡವಾದ ಕಾಯ್ದೆಗಳ ತಿದ್ದುಪಡಿ ಸರ್ಕಾರಕ್ಕೆ ಏಕೆ ಬೇಕು? ಈ ತಿದ್ದುಪಡಿಗಳಿಂದಾಗಿ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಅನ್ಯಾಯವಾಗುತ್ತದೆ. ದೇಸಿ ಸ್ಥಳೀಯ ವರ್ತಕರು ಬೀದಿಪಾಲಾಗುತ್ತಾರೆ. ಆದ್ದರಿಂದ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.

ಪಕ್ಷದ ಮುಖಂಡರಾದ ಶಾಮರಾವ್ ಸೂರನ್, ಶಂಕರ ಕಟ್ಟಿ ಸಂಗಾವಿ, ಮೈನೂದ್ದೀನ್ ಶೇಖ್ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು