ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ: ಹೊಲದ ರಸ್ತೆಗೆ ಡಾಂಬರ್ ಮಾಡಲು ಒತ್ತಾಯ

Published 23 ನವೆಂಬರ್ 2023, 14:52 IST
Last Updated 23 ನವೆಂಬರ್ 2023, 14:52 IST
ಅಕ್ಷರ ಗಾತ್ರ

ಕಲಬುರಗಿ: ಕಮಲಾಪುರ ತಾಲ್ಲೂಕಿನ ಶ್ರೀಚಂದ ಗ್ರಾಮದಿಂದ ಜವಳಗಾ ಹೋಗುವ ಹೊಲದ ರಸ್ತೆಯು ತೀವ್ರವಾಗಿ ಹದಗೆಟ್ಟಿದ್ದು, ಡಾಂಬರ್ ಮಾಡಿಸಿಕೊಡುವಂತೆ ಮುಖ್ಯಮಂತ್ರಿ, ಸ್ಥಳೀಯ ಶಾಸಕರು ಹಾಗೂ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರೂ ಇನ್ನೂ ಡಾಂಬರೀಕರಣ ಮಾಡಿಲ್ಲ ಎಂದು ರೈತ ಮುಖಂಡ ಸುಭಾಷ ಶರಣಪ್ಪ ಬಡಿಗೇರ ಬೇಸರ ವ್ಯಕ್ತಪಡಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ರಸ್ತೆಯ ಮೂಲಕ ನಿತ್ಯ ನೂರಾರು ರೈತರು, ಕೂಲಿಕಾರ್ಮಿಕರು ಹೋಗುತ್ತಾರೆ. ಮಳೆಗಾಲದಲ್ಲಿ ಈ ರಸ್ತೆಯ ಸ್ಥಿತಿ ಇನ್ನಷ್ಟು ಗಂಭೀರವಾಗಿರುತ್ತದೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದಾಗ ಮುಖ್ಯಮಂತ್ರಿ ಕಚೇರಿಯವರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಿಗೆ ರವಾನಿಸಿದ್ದಾರೆ. ಆದರೆ, ಅಲ್ಲಿಂದಲೂ ಯಾವುದೇ ಮಾಹಿತಿ ಸಿಕ್ಕಿಲ್ಲ. ಈ ರಸ್ತೆಯ ಆಸುಪಾಸಿನಲ್ಲಿ ಸುಮಾರು 2 ಸಾವಿರ ಎಕರೆ ಜಮೀನಿದ್ದು, ಬಿತ್ತನೆ ಮತ್ತು ರಾಶಿ ಮಾಡುವ ಸಂದರ್ಭದಲ್ಲಿ ಟ್ರ್ಯಾಕ್ಟರ್ ಮತ್ತಿತರ ವಾಹನಗಳನ್ನು ಕೊಂಡೊಯ್ಯಲು ಸಮಸ್ಯೆಯಾಗುತ್ತಿದೆ. ಈ ಕುರಿತು ಸ್ಥಳೀಯ ಶಾಸಕ ಬಸವರಾಜ ಮತ್ತಿಮಡು ಅವರನ್ನು ಮೂರು ಬಾರಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ಅವರು ಭರವಸೆ ನೀಡಿದ್ದಾರೆಯೇ ಹೊರತು ಇನ್ನೂ ಕಾರ್ಯರೂಪಕ್ಕೆ ತಂದಿಲ್ಲ’ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT