ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತ ಹೋರಾಟಗಾರ ಬಸವರಡ್ಡಿ ಕರಡ್ಡಿ ನಿಧನ

Last Updated 31 ಡಿಸೆಂಬರ್ 2020, 5:47 IST
ಅಕ್ಷರ ಗಾತ್ರ

ಕಲಬುರ್ಗಿ: ರೈತ ಹೋರಾಟಗಾರರಾಗಿದ್ದ ಬಸವರಡ್ಡಿ ಕರಡ್ಡಿ ನಾಲವಾರ (64) ಬುಧವಾರ ಸಂಜೆ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಇದ್ದಾರೆ.

ನಾಲವಾರದಲ್ಲಿದ್ದಾಗ ತೀವ್ರ ಹೃದಯಾಘಾತಕ್ಕೊಳಗಾದರು, ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜವಾಗಲಿಲ್ಲ. ಅಷ್ಟರದಲ್ಲಿ ಕೊನೆಯುಸಿರೆಳೆದಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಗುರುವಾರ ಮಧ್ಯಾಹ್ನ 3 ಗಂಟೆಗೆ ಸ್ವಗ್ರಾಮವಾಗಿರುವ ಚಿತ್ತಾಪುರ ತಾಲ್ಲೂಕಿನ ನಾಲವಾರದಲ್ಲಿರುವ ಸ್ವಂತ ಹೊಲದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಕರ್ನಾಟಕ ರಾಜ್ಯರೈತ ಸಂಘದ ರಾಜ್ಯ ಉಪಾಧ್ಯಕ್ಷರಾಗಿದ್ದ ಬಸವರಡ್ಡಿ ಅವರು ಪ್ರೊ. ನಂಜುಂಡಸ್ವಾಮಿ ಅವರ ಒಡನಾಡಿಯಾಗಿದ್ದರು. ಮೂರೂವರೆ ದಶಕಗಳಿಂದ ರೈತರಪರವಾದ ಹೋರಾಟಗಳನ್ನು ನಡೆಸಿಕೊಂಡು ಬಂದಿದ್ದರು. ಕಲಬುರ್ಗಿ, ಯಾದಗರಿ, ಬೀದರ್, ರಾಯಚೂರು, ವಿಜಯಪುರ, ಬೆಳಗಾವಿ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸುತ್ತಾಡಿ ರೈತ ಸಂಘವನ್ನು ಕಟ್ಟಿದ್ದರು. ತೊಗರಿ ಬೆಂಬಲ ಬೆಲೆಗಾಗಿ ಮಾರುತಿ ಮಾನ್ಪಡೆ ಅವರ ಜತೆಗೂಡಿ ಬೃಹತ್ ಹೋರಾಟ ನಡೆಸಿದ್ದರು. ತೊಗರಿ ಮಂಡಳಿ ಸ್ಥಾಪನೆಗಾಗಿ, ಕಬ್ಬರು ಬೆಳೆಗಾರರ ಸಮಸ್ಯೆ ಸೇರಿದಂತೆ ಪಂಪ್‍ಸೆಟ್‍ಗಳಿಗೆ ಮೀಟರ್ ಅಳವಡಿಕೆ ವಿರುದ್ಧ ಸಹ ಬೃಹತ್ ಹೋರಾಟ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT