ಮಂಗಳವಾರ, ಜೂನ್ 28, 2022
25 °C

ಜೇವರ್ಗಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜೇವರ್ಗಿ: ರೈತರ ಎಲ್ಲ ಬೆಳೆಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡಬೇಕು, ಸ್ವಾಮಿನಾಥನ ವರದಿ ಜಾರಿಗೆ ಆಗ್ರಹ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಧರಣಿ ನಡೆಸಲಾಯಿತು.

60 ವರ್ಷ ದಾಟಿದ ರೈತರಿಗೆ ಹಾಗೂ ಕೂಲಿಕಾರ್ಮಿಕರಿಗೆ ಮಾಸಿಕ ₹ 7500, ನರೇಗಾ ಕೆಲಸದ ಸಮಯವನ್ನು ಬೆಳಿಗ್ಗೆ 7ರಿಂದ 11 ಗಂಟೆಯವರೆಗೆ ನಿಗದಿ ಮಾಡಬೇಕು, ಕೂಲಿಯನ್ನು ₹600 ಹೆಚ್ಚಳ ಮಾಡಬೇಕು, ಬಾಕಿ ಇರುವ ವೇತನ ಹಾಗೂ ಕೊರೊನಾ ಪರಿಹಾರ ತಕ್ಷಣ ನೀಡಬೇಕು ಎಂದು ಒತ್ತಾಯಿಸಿದರು.

ಬೆಳೆ ಹಾನಿಯಾದ ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕು, ಜೇವರ್ಗಿಯಿಂದ ಗೌನಳ್ಳಿ ವರೆಗಿನ ರಸ್ತೆ ಡಾಂಬರೀಕರಣ ಮಾಡಬೇಕು ಸೇರಿದಂತೆ ಇತರೆ ಬೇಡಿಕೆಗಳಿಗೆ ಒತ್ತಾಯಿಸಲಾಯಿತು.

ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸುಭಾಷ ಹೊಸಮನಿ, ಪರಶುರಾಮ ಬಡಿಗೇರ, ವೆಂಕೋಬರಾವ ವಾಗಣಗೇರಾ, ಮಲಕಪ್ಪ ಮ್ಯಾಗೇರಿ ಹರನೂರ, ಶಂಕರಲಿಂಗ ರೇವನೂರ, ಶ್ರೀನಾಥ ಕೋಳಕೂರ, ಜೈಭೀಮ ಮುದಬಾಳ, ಮಲ್ಲಿಕಾರ್ಜುನ ವರ್ಚನಳ್ಳಿ, ಬಸವರಾಜ ಶಖಾಪೂರ, ನಿಂಗಣ್ಣ ಯಾತನೂರ, ಮಹೇಶ ಬಳಬಟ್ಟಿ, ರಾಜು ಸಾಥಖೇಡ ರೇವನೂರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು