ಕುಲಪತಿ ಡಾ. ನಿಷ್ಠಿಗೆ ಸನ್ಮಾನ

ಗುರುವಾರ , ಮೇ 23, 2019
32 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಕುಲಪತಿ ಡಾ. ನಿಷ್ಠಿಗೆ ಸನ್ಮಾನ

Published:
Updated:
Prajavani

ಕಲಬುರ್ಗಿ: ನಗರದ ಶರಣಬಸವ ವಿಶ್ವವಿದ್ಯಾಲಯದ ಕುಲಪತಿ ಡಾ. ನಿರಂಜನ ನಿಷ್ಠಿ ಅವರನ್ನು ವಿಶ್ವವಿದ್ಯಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ಶುಕ್ರವಾರ ಸನ್ಮಾನಿಸಿದರು.

ವಿಶ್ವವಿದ್ಯಾಲಯವು ಈಚೆಗೆ ಎಐಸಿಟಿಇಯಿಂದ ತನ್ನ ಎಲ್ಲ ಕೋರ್ಸಗಳಿಗೆ ಮಾನ್ಯತೆ ಪಡೆದ ಪ್ರಯುಕ್ತ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ನಿಷ್ಠಿ, ‘ಮಾನ್ಯತೆ ಪಡೆಯಲು ಶರಣಬಸವ ವಿಶ್ವವಿದ್ಯಾಲಯದ ಸಿಬ್ಬಂದಿ ಮತ್ತು ಅಧಿಕಾರಿಗಳು ನಿರಂತರವಾಗಿ ಶ್ರಮಿಸಿದ್ದಾರೆ. ಕುಲಾಧಿಪತಿ ಡಾ. ಶರಣಬಸವಪ್ಪ ಅಪ್ಪ ಅವರ ಸೂಕ್ತ ಮಾರ್ಗದರ್ಶನ ಮತ್ತು ಸಲಹೆಯಿಂದಾಗಿ ಕಡಿಮೆ ಅವಧಿಯಲ್ಲಿ ವಿಶ್ವವಿದ್ಯಾಲಯವು ಎಲ್ಲ ಕೋರ್ಸ್‌ಗಳಿಗೆ ಮಾನ್ಯತೆ ಪಡೆಯಲು ಸಾಧ್ಯವಾಗಿದೆ’ ಎಂದರು.

ಕುಲಸಚಿವ ಡಾ. ಅನಿಲಕುಮಾರ ಬಿಡವೆ, ಸಮ ಕುಲಪತಿ ಡಾ. ವಿ.ಡಿ.ಮೈತ್ರಿ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಟಿ.ವಿ.ಶಿವಾನಂದನ್ ಮಾತನಾಡಿದರು. ಡೀನ್ ಡಾ. ಲಕ್ಷ್ಮೀ ಮಾಕಾ, ಬಸವರಾಜ ಮಠಪತಿ ಇದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !