ಕಲಬುರಗಿ: ಬಿಸಿಯೂಟದ ಸಾಂಬಾರು ಪಾತ್ರೆಯಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಮೃತಪಟ್ಟಿದ್ದಾಳೆ.
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಚಿಣಮಗೇರ ಗ್ರಾಮದ ಸರ್ಕಾರಿ ಶಾಲೆಯ 2ನೇ ತರಗತಿಯ ವಿದ್ಯಾರ್ಥಿನಿ ಮಹಾಂತಮ್ಮ (8) ಮೃತಳು.
ನವೆಂಬರ್ 16ರಂದು ಬಿಸಿಯೂಟ ತಯಾರಿಸುವ ಸಾಂಬಾರು ಪಾತ್ರೆಯಲ್ಲಿ ವಿದ್ಯಾರ್ಥಿನಿ ಬಿದ್ದಿದ್ದಳು. ಗಂಭೀರವಾಗಿ ಗಾಯಗೊಂಡಿದ್ದ ಮಹಾಂತಮ್ಮಳನ್ನ ಕಲಬುರಗಿಯ ಜಿಮ್ಸ್‌ಗೆ ದಾಖಲಿಸಲಾಗಿತ್ತು. ನಿನ್ನೆಯಷ್ಟೇ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಭಾನುವಾರ ನಸುಕಿನ ಜಾವ 3.30ರ ಸುಮಾರಿಗೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ. ಈ ಪ್ರಕರಣದಲ್ಲಿ ಈಗಾಗಲೇ ಮುಖ್ಯ ಶಿಕ್ಷಕ, ಸಹ ಶಿಕ್ಷಕ ಹಾಗೂ ಅಡುಗೆ ಮುಖಸ್ಥರನ್ನು ಅಮಾನತು ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.