ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘2020ರಲ್ಲಿ ಪರಿವಾರ ಮತ್ತು ತಳವಾರ ಸಮುದಾಯಗಳಿಗೆ ಪರಿಶಿಷ್ಟ ಪಂಗಡದ ಸೌಲಭ್ಯ ವಿಸ್ತರಣೆ ಮಾಡಬಹುದು ಎಂದು ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದೆ. ಅದರಂತೆ ರಾಜ್ಯದಲ್ಲಿಯೂ ನಾಯಕ ಜಾತಿಯ ತಳವಾರ ಮತ್ತು ಪರಿವಾರ ಜಾತಿಯವರಿಗೆ ಎಸ್.ಟಿ. ಪ್ರಮಾಣ ಪತ್ರ ನೀಡಬೇಕು ಎಂದು ಆದೇಶ ಮಾಡಲಾಗಿದೆ. ಕಲಬುರಗಿ, ಯಾದಗಿರಿ, ವಿಜಯಪುರ, ಬೆಳಗಾವಿ ಸೇರಿದಂತೆ ಸುಮಾರು ಒಂದು ಲಕ್ಷಕ್ಕೂ ಅಧಿಕ ಜನರಿಗೆ ಪ್ರಮಾಣಪತ್ರ ನೀಡಲಾಗಿದೆ’ ಎಂದು ಹೇಳಿದರು.