ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿಶೇಷ ಮಕ್ಕಳಿಗೆ ಮಾತ್ರ ಆರ್ಥಿಕ ನೆರವು: ಡಿ.ಸಿ

Published : 24 ಸೆಪ್ಟೆಂಬರ್ 2024, 16:02 IST
Last Updated : 24 ಸೆಪ್ಟೆಂಬರ್ 2024, 16:02 IST
ಫಾಲೋ ಮಾಡಿ
Comments

ಕಲಬುರಗಿ: ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ ₹24 ಸಾವಿರ ವಿದ್ಯಾರ್ಥಿ ವೇತನ ಸೌಲಭ್ಯವಿದ್ದು, ತಂದೆ ಇಲ್ಲದ ಮಕ್ಕಳು ಇದರ ಪ್ರಯೋಜನ ಪಡೆಯಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ದಿನಗಳಿಂದ ಸಂದೇಶ ಹರಿದಾಡುತ್ತಿದ್ದು, ಈ ಕುರಿತು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ತಂದೆ ಇಲ್ಲದ ಮಕ್ಕಳ ಬದಲಾಗಿ ಅರ್ಹತಾ ಮಾನದಂಡ ಪೂರೈಸಿದ ವಿಶೇಷ ಮಕ್ಕಳಿಗೆ ಮಾತ್ರ ಆರ್ಥಿಕ ನೆರವು ನೀಡುವ ಯೋಜನೆ ಇದಾಗಿದೆ. ಅನಾಥ ಮಕ್ಕಳು, ಪಾಲನೆ ಮತ್ತು ರಕ್ಷಣೆಗೆ ಅವಶ್ಯವಿರುವ ಪಾಲನಾ ಸಂಸ್ಥೆಯ ಮಕ್ಕಳು, ವಸತಿ ರಹಿತರು, ನೈಸರ್ಗಿಕ ವಿಕೋಪಗಳ ಸಂತ್ರಸ್ತರು, ಬಾಲಕಾರ್ಮಿಕರು, ಬಾಲ್ಯವಿವಾಹ ಸಂತ್ರಸ್ತರು, ಪೋಷಕರು ಮಾರಣಾಂತಿಕ ಕಾಯಿಲೆಗೆ ತುತ್ತಾದವರು, ಅಂಗವಿಕಲ ಮಕ್ಕಳು, ಭಿಕ್ಷಾಟನೆ ಹಾಗೂ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಕ್ಕಳು, ಬಂಧಿಖಾನೆಯಲ್ಲಿರುವ ಪೋಷಕರ ಮಕ್ಕಳು ಈ ಸೌಲಭ್ಯ ಪಡೆಯಲು ಅರ್ಹರಾಗಿದ್ದಾರೆ ಎಂದು ತಿಳಿಸಿದ್ದಾರೆ.

18 ವರ್ಷದೊಳಗಿನ ಮಕ್ಕಳು ಕುಟುಂಬದೊಂದಿಗೆ ಬೆಳೆಯುವ ದೃಷ್ಟಿಯಿಂದ ಪ್ರತಿ ತಿಂಗಳು ₹4 ಸಾವಿರಗಳಂತೆ ಒಂದು ವರ್ಷಕ್ಕೆ ಸೀಮಿತವಾಗಿ ಮಾತ್ರ ಆರ್ಥಿಕ ನೆರವು ನೀಡಲಾಗುತ್ತಿದೆ. ಅರ್ಜಿಗಳನ್ನು ಸೆ.30ರೊಳಗೆ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದ ಎದುರುಗಡೆ ಇರುವ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಚೇರಿಯಿಂದ ಪಡೆದುಕೊಂಡು ಭರ್ತಿ ಮಾಡಿ ಅಕ್ಟೋಬರ್ 10ರೊಳಗಾಗಿ ಸೇಡಂ ರಸ್ತೆಯ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಸಲ್ಲಿಸಲು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08472-243219ಗೆ ಸಂಪರ್ಕಿಸಬಹುದು.

ಗ್ರಾಮ ಒನ್: ಅರ್ಜಿ ಆಹ್ವಾನ

ಕಲಬುರಗಿ: ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ (ಕಮಲಾಪೂರ ಹಾಗೂ ಯಡ್ರಾಮಿ ತಾಲ್ಲೂಕು ಹೊರತುಪಡಿಸಿ) ಗ್ರಾಮ ಪಂಚಾಯಿತಿಗಳಲ್ಲಿ ಖಾಲಿಯಿರುವ ಒಟ್ಟು 34 ಗ್ರಾಮ ಒನ್ ಪ್ರಾಂಚೈಸಿ ಕೇಂದ್ರಗಳ ಸ್ಥಾಪನೆ ಹಾಗೂ ನಿರ್ವಹಣೆಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.

ಕಲಬುರಗಿ–8, ಶಹಾಬಾದ್‌–1, ಅಫಜಲಪುರ–2, ಆಳಂದ-11, ಚಿಂಚೋಳಿ–2, ಚಿತ್ತಾಪುರ–1, ಜೇವರ್ಗಿ–6, ಸೇಡಂ–2 ಹಾಗೂ ಕಾಳಗಿ–1ಕೇಂದ್ರಗಳನ್ನು ತೆರೆಯಲು ಅವಕಾಶವಿದೆ. ಗ್ರಾಮ ಒನ್ ಫ್ರಾಂಚೈಸಿ ಕೇಂದ್ರಗಳನ್ನು ನಡೆಸಿಕೊಂಡು ಹೋಗಲು ಇಚ್ಛೆಯುಳ್ಳ ಅರ್ಹ ಅಭ್ಯರ್ಥಿಗಳು https://kal-mys.gramaone.karnataka.gov.in/index.php/applicant-registration-initial-step ಲಿಂಕ್ ಮೂಲಕ ಸೆಪ್ಟೆಂಬರ್ 30ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಗ್ರಾಮ ಪಂಚಾಯಿತಿವಾರು ಖಾಲಿ ಇರುವ ಗ್ರಾಮ ಒನ್ ಪ್ರಾಂಚೈಸಿ ಕೇಂದ್ರಗಳ ವಿವರ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿ ಕಚೇರಿ ಸಂಪರ್ಕಿಸಲು ಕೋರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT