ಕಲಬುರಗಿ: ನಗರದ ಸೂಪರ್ ಮಾರ್ಕೆಟ್ನಲ್ಲಿರುವ ಕೆನರಾ ಬ್ಯಾಂಕ್ಗೆ ಸೇರಿದ ಹಳೆಯ ಜನರೇಟರ್ನಿಂದ ಭಾನುವಾರ ಸಂಜೆ ಹೊತ್ತಿದ ಬೆಂಕಿಯನ್ನು ನಂದಿಸುವ ವೇಳೆ ಅಗ್ನಿಶಾಮಕ ದಳದ ಸಿಬ್ಬಂದಿ ರಮೇಶ್ ಪವಾರ (55) ಎಂಬುವರು ಮೃತಪಟ್ಟಿದ್ದಾರೆ.

‘ಬ್ಯಾಂಕ್ನ ಸಿಬ್ಬಂದಿ ಎಲ್ಲರೂ ಕೆಲಸ ಮುಗಿಸಿಕೊಂಡು ಮನೆಗೆ ತೆರಳಿದ್ದರು. ಬ್ಯಾಂಕ್ನ ಹಿಂಬದಿಯ ಕಟ್ಟಡದಲ್ಲಿ ಜನರೇಟರ್ ಇದ್ದು, ಅದರಿಂದ ಹೊಗೆಯ ವಾಸನೆ ಬರುತ್ತಿರುವುದನ್ನು ಕಟ್ಟಡದ ಎದುರಿಗೆ ಮಣ್ಣಿನ ಪಾತ್ರೆಗಳನ್ನು ಮಾರುತ್ತಿದ್ದ ವ್ಯಾಪಾರಿ ಗಮನಿಸಿದ್ದಾರೆ. ತಕ್ಷಣವೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ.

ಸ್ಥಳಕ್ಕೆ ಬಂದ ಸಿಬ್ಬಂದಿ ಬೆಂಕಿ ನಂದಿಸುವ ವೇಳೆ ವಿದ್ಯುತ್ ಸ್ಪರ್ಶ ಶಾಕ್ ತಗುಲಿ ಹೊರಗೆ ಬಿದ್ದಿದ್ದಾರೆ. ಅವರನ್ನು ತಕ್ಷಣವೇ ಸಂಚಾರ ಠಾಣೆಯ ಪೊಲೀಸರು ಆಟೊದಲ್ಲಿ ಜಯದೇವ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರು’ ಎಂದು ಪೊಲೀಸರು ತಿಳಿಸಿದ್ದಾರೆ.

‘ಜನರೇಟರ್ನಿಂದ ಹೊತ್ತಿಕೊಂಡ ಬೆಂಕಿ ಕೆಲವೇ ನಿಮಿಷಗಳಲ್ಲಿ ಹೊರಭಾಗದಲ್ಲೂ ವ್ಯಾಪಿಸಿತು. ಕಟ್ಟಡದ ಎದುರಿಗೆ ಇದ್ದ ಗಿಡದ ರೆಂಬೆಗಳಿಗೂ ಆವರಿಸಿಕೊಂಡಿತು. ಹೀಗಾಗಿ, ಮುನ್ನೆಚ್ಚರಿಕೆ ಕ್ರಮವಾಗಿ ಜೆಸ್ಕಾಂ ಸಿಬ್ಬಂದಿ ಕೂಡಲೇ ಸೂಪರ್ ಮಾರ್ಕೆಟ್ನ ಆ ಭಾಗದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಿದರು. ಪರಿಸ್ಥಿತಿ ತಹಬಂದಿಗೆ ಬಂದ ಬಳಿಕ ವಿದ್ಯುತ್ ಪೂರೈಕೆ ಪುನರಾರಂಭಿಸಲಾಯಿತು’ ಎಂದು ಅವರು ತಿಳಿಸಿದ್ದಾರೆ.

‘ರಮೇಶ್ ಪವಾರ್ ಅವರಿಗೆ ರಕ್ತದೊತ್ತಡದಲ್ಲಿ ಹೆಚ್ಚು ಕಡಿಮೆಯಾಗಿದೆ ಎಂದು ಅವರ ಜೊತೆಯಲ್ಲಿದ್ದ ಸಿಬ್ಬಂದಿ ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕವೇ ನಿಜವಾದ ಕಾರಣ ಗೊತ್ತಾಗಲಿದೆ’ ಎಂದು ಡಿಸಿಪಿ ಅಡ್ಡೂರು ಶ್ರೀನಿವಾಸಲು ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.