ಶುಕ್ರವಾರ, ಡಿಸೆಂಬರ್ 2, 2022
22 °C

ಎಫ್ ಕೆಸಿಸಿಐ ಮಾಜಿ ಅಧ್ಯಕ್ಷ ಎಸ್.ಎಸ್. ಪಾಟೀಲ ಕಡಗಂಚಿ ಇನ್ನಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರಗಿ: ಖ್ಯಾತ ಉದ್ಯಮಿ, ಪಾಟೀಲ ಗ್ರೂಪ್ ಆಫ್ ಇಂಡಸ್ಟ್ರೀಸ್ ಮುಖ್ಯಸ್ಥರು ಹಾಗೂ ಬೆಂಗಳೂರಿನ ಎಫ್ ಕೆಸಿಸಿಐ ಮಾಜಿ ಅಧ್ಯಕ್ಷ ಶಾಂತಲಿಂಗಪ್ಪ ಎಸ್. ಪಾಟೀಲ ಕಡಗಂಚಿ (84) ಅವರು ಮಂಗಳವಾರ ರಾತ್ರಿ ಇಲ್ಲಿನ ಗಂಜ್ ಪ್ರದೇಶದ ತಮ್ಮ ನಿವಾಸದಲ್ಲಿ ನಿಧನರಾದರು. 

ಅವರಿಗೆ ಪತ್ನಿ, ಮೂವರು ಪುತ್ರಿಯರು, ಇಬ್ಬರು ಪುತ್ರರು ಇದ್ದಾರೆ.

ಜಿಲ್ಲೆಯ ಆಳಂದ ತಾಲ್ಲೂಕಿನ ಕಡಗಂಚಿ ಗ್ರಾಮದವರಾದ ಪಾಟೀಲ ಅವರು ಹೈದರಾಬಾದ್ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ (ಎಚ್ ಕೆಸಿಸಿಐ) ನ ಸಂಸ್ಥಾಪಕ ಅಧ್ಯಕ್ಷರಾಗಿ ಸುದೀರ್ಘ 25 ವರ್ಷ ಸೇವೆ ಸಲ್ಲಿಸಿದ್ದರು.

ಸ್ಟೀಲ್ ಮತ್ತು ರೈಲು ಹಳಿಗೆ ಬಳಸಲಾಗುವ ಕಾಂಕ್ರೀಟ್ ಕಂಬಗಳ ಉತ್ಪಾದನಾ ಘಟಕ ಸೇರಿದಂತೆ ಹಲವು ಉದ್ಯಮಗಳ ಒಡೆತನ ಹೊಂದಿದ್ದರು.

ಕಲಬುರಗಿ ಹಾಗೂ ಹೈದರಾಬಾದ್ ಸೇರಿದಂತೆ ಹಲವು ಕಡೆ ಅವರ ಉದ್ಯಮಗಳಿವೆ.

ಅಂತ್ಯಕ್ರಿಯೆ ಬುಧವಾರ ಸಂಜೆ 4ಕ್ಕೆ ಹುಮನಾಬಾದ್ ರಸ್ತೆಯ ಕೆಎಂಎಫ್ ಡೇರಿ ಎದುರಿನ ಪಾಟೀಲ ಗ್ರೂಪ್ ಆಫ್ ಇಂಡಸ್ಟ್ರೀಸ್ ಆವರಣದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು