ಕಲಬುರಗಿ: ಮೂರನೇ ದಿನ ಹಾರಾಡಿದ ರಾಷ್ಟ್ರಧ್ವಜ

ಕಲಬುರಗಿ: ಕಾಳಗಿ ಪಟ್ಟಣದಿಂದ ಕೋಡ್ಲಿ ರಸ್ತೆ ಮಾರ್ಗ ಬದಿಯಿರುವ ಸುಬ್ಬುನಾಯಕ ತಾಂಡಾದ ಅಂಗನವಾಡಿ ಕೇಂದ್ರದಲ್ಲಿ ಬುಧವಾರ ಮಧ್ಯಾಹ್ನವೂ ರಾಷ್ಟ್ರಧ್ವಜ ಹಾರುತ್ತಿರುವುದು ಕಂಡು ಬಂತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಗ್ರ ಶಿಶು ಯೋಜನೆ ಚಿತ್ತಾಪುರಕ್ಕೆ ಸಂಬಂಧಿಸಿದ ಈ ಅಂಗನವಾಡಿ ಕೇಂದ್ರದಲ್ಲಿ ನ.1ರಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಆಚರಿಸಲಾಗಿದೆ. ‘ರಾಜ್ಯೋತ್ಸವ ಆಚರಿಸಿದ ಬಳಿಕ ಸಂಜೆ ಧ್ವಜವನ್ನು ಇಳಿಸಬೇಕಿತ್ತು. ಆದರೆ, ಅದನ್ನು ಇಳಿಸದೇ ಹಾಗೆಯೇ ಬಿಡಲಾಗಿದೆ. ಅಂಗನವಾಡಿ ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಸ್ಥಳೀಯರು ಒತ್ತಾಯಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.