ಬುಧವಾರ, ಜನವರಿ 27, 2021
20 °C

ಕಲಬುರ್ಗಿಯಿಂದ ತಿರುಪತಿಗೆ ಹಾರಿದ ವಿಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಉಡಾನ್ ಯೋಜನೆಯಡಿ ಕಲಬುರ್ಗಿ–ತಿರುಪತಿ ಮಧ್ಯೆ ಮೊದಲ ವಿಮಾನ ಸಂಚಾರ ಸೋಮವಾರ ಆರಂಭವಾಯಿತು.

ಸಂಸದ ಡಾ.ಉಮೇಶ ಜಾಧವ್ ಅವರು ಮೊದಲ ಪ್ರಯಾಣಿಕರಿಗೆ ಬೋರ್ಡಿಂಗ್ ಪಾಸ್ ನೀಡುವ ಮೂಲಕ ವಿಮಾನಸೇವೆಗೆ ಚಾಲನೆ ನೀಡಿದರು.

50 ಆಸನ ಸಾಮರ್ಥ್ಯದ ಈ ವಿಮಾನದಲ್ಲಿ 41 ಜನ ಪ್ರಯಾಣಿಸಿದರು. ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ, ಎಚ್‌ಕೆಸಿಸಿಐ ಅಧ್ಯಕ್ಷ ಅಮರನಾಥ ಪಾಟೀಲ, ವಿಮಾನ ನಿಲ್ದಾಣ ನಿರ್ದೇಶಕ ಜ್ಞಾನೇಶ್ವರರಾವ್, ಸ್ಟಾರ್ ಏರ್ ವಿಮಾನಯಾನ ಸಂಸ್ಥೆಯ ಸಿಬ್ಬಂದಿ ಇದ್ದರು.

ಈ ವಿಮಾನವು ಸೋಮವಾರ, ಬುಧವಾರ, ಶುಕ್ರವಾರ ಹಾಗೂ ಭಾನುವಾರ ಸಂಚರಿಸಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು