ಕಲಬುರಗಿ: ಭೀಮಾನದಿಯ ಪ್ರವಾಹದಿಂದ ಸಂಕಟ ಎದುರಿಸುತ್ತಿರುವ ತಾಲ್ಲೂಕಿನ ಫರತಾಬಾದ್, ಸರಡಗಿ ಗ್ರಾಮಕ್ಕೆ ಭಾನುವಾರ ಪ್ರಾದೇಶಿಕ ಆಯುಕ್ತೆ ಜಹೀರಾ ನಸ್ಸಿಮ್ ಭೇಟಿ ನೀಡಿ ಪರಿಶೀಲಿಸಿದರು.

ತಹಶೀಲ್ದಾರ್ ಕೆ.ಆನಂದಶೀಲ ಅವರಿಂದ ಸಂತ್ರಸ್ತರ ಸ್ಥಳಾಂತರ, ಕಾಳಜಿ ಕೇಂದ್ರ ಸೇರಿದಂತೆ ಇನ್ನಿತರ ಮಾಹಿತಿ ಪಡೆದ ಅವರು, ಯಾವುದೇ ಮಾನವ ಹಾನಿಯಾಗದಂತೆ ಅಧಿಕಾರಿಗಳು ಸ್ಥಳದಲ್ಲಿದ್ದು, ಜನರನ್ನು ಸಂರಕ್ಷಿಸಬೇಕು ಎಂದು ಸೂಚಿಸಿದರು.

ಕೂಡಿ ದರ್ಗಾದಲ್ಲಿ ತೆರೆಯಲಾಗಿರುವ ಕಾಳಜಿ ಕೇಂದ್ರಕ್ಕೂ ಭೇಟಿ ನೀಡಿದ ಅವರು, ಸಂತ್ರಸ್ತರಿಗೆ ಗುಣಮಟ್ಟದ ಊಟ ಉಪಚಾರದ ವ್ಯವಸ್ಥೆ ಮಾಡಬೇಕು. ಆರೋಗ್ಯ ತಪಾಸಣೆ ಮಾಡಬೇಕು. ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಎಲ್ಲಾ ರೀತಿಯ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಭೇಟಿ:

ಚಿತ್ತಾಪುರ ತಾಲ್ಲೂಕಿನ ಚಾಮನೂರ ಮತ್ತು ಕಡಬೂರ ಗ್ರಾಮಗಳ ನೆರೆ ಪೀಡಿತ ಪ್ರದೇಶಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ಸಿಂಗ್ ಮೀನಾ ಅವರು ಭಾನುವಾರ ಭೇಟಿ ನೀಡಿ ಎನ್ಡಿಆರ್ಎಫ್ ತಂಡದ ಜೊತೆಯಲ್ಲಿ ಬೋಟ್ನಲ್ಲಿ ತೆರಳಿ ವೀಕ್ಷಣೆ ಮಾಡಿದರು.

ಇದೇ ಸಂದರ್ಭದಲ್ಲಿ ಕುಂದನೂರ ಗ್ರಾಮದ ಕಾಳಜಿ ಕೇಂದ್ರ ಹಾಗೂ ವಾಡಿ ಪಟ್ಟಣದ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ, ಸಂತ್ರಸ್ತರೊಂದಿಗೆ ಉಪಹಾರ ಸೇವಿಸಿದರು. ಅಲ್ಲಿನ ಪರಿಸ್ಥಿತಿ ಅವಲೋಕಿಸಿ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಪ್ರವಾಹ ಪೀಡಿತರಿಗೆ ಯಾವುದೇ ತೊಂದರೆಯಾಗದಂತೆ ಸಕಲ ಸೌಕರ್ಯ ಕಲ್ಪಿಸಲು ಸೂಚಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ನೋಡಲ್ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.