ಸೇಡಂ: ‘ಅತಿವೃಷ್ಟಿಯಿಂದ ತಾಲ್ಲೂಕು ಸೇರಿದಂತೆ ಮತಕ್ಷೇತ್ರದಲ್ಲಿನ ಜನ ತೊಂದರೆ ಎದುರಿಸುತ್ತಿದ್ದಾರೆ. ಯಾವ ಸಂತ್ರಸ್ತರೂ ಪರಿಹಾರದಿಂದ ವಂಚಿತರಾಗದಂತೆ ಅಧಿಕಾರಿಗಳು ಸಮೀಕ್ಷೆ ನಡೆಸಬೇಕು’ ಎಂದು ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಅತಿವೃಷ್ಟಿ ಹಾನಿಯ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಅತಿವೃಷ್ಟಿಯಿಂದ ಹಾನಿಯಾದ ಬೆಳೆಹಾನಿ ಸೇರಿದಂತೆ ವಿವಿಧ ಇಲಾಖೆಯ ರಸ್ತೆ, ಕಟ್ಟಡ ಕಾಮಗಾರಿ ಪರಿಶೀಲಿಸಬೇಕು. ಸ್ಥಳಕ್ಕೆ ಭೇಟಿ ನೀಡಿ ಸಮೀಕ್ಷೆ ನಡೆಸಿ, ಸಂಪೂರ್ಣ ಮಾಹಿತಿ ಪಡೆದುಕೊಳ್ಳಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕಾರ್ಯನಿರ್ವಹಿಸಬೇಕು’ ಎಂದರು.

ಕೃಷಿ ಜಿಲಾಖೆ ಜಂಟಿ ನಿರ್ದೇಶಕ ಸಮದ್ ಪಟೇಲ್ ಮಾತನಾಡಿ, ‘ಕೃಷಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಅತಿವೃಷ್ಟಿ ಸಮೀಕ್ಷೆ ನಡೆಯುತ್ತಿದ್ದು, ಡ್ರೋನ್ ಮೂಲಕ ಸಮೀಕ್ಷೆ ಕಾರ್ಯ ಮಾಡಲಾಗಿದೆ. ನಿರಂತರ ಮಳೆಯಿಂದಾಗಿ ಸಮೀಕ್ಷೆ ಕಾರ್ಯ ಇನ್ನೂ ಮುಗಿದಿಲ್ಲ. ಹಿಂಗಾರು ಬಿತ್ತನೆಗೆ ಅಗತ್ಯವಾದ ರಸಗೊಬ್ಬರ ತರಿಸುವ ಪ್ರಯತ್ನ ಮಾಡಲಾಗುತ್ತಿದೆ’ ಎಂದು ತಿಳಿಸಿದರು.

ಸಹಾಯಕ ಕೃಷಿ ನಿರ್ದೇಶಕ ವಿಶಾಲಕುಮಾರ ಮಾತನಾಡಿ, ‘ಸುಮಾರು 6,850 ಹೆಕ್ಟರ್ ಪ್ರದೇಶ ಅತಿವೃಷ್ಟಿಯಿಂದ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಮುಂದಿನ ದಿನಗಳಲ್ಲಿ ಇದು ಹೆಚ್ಚಲಿದೆ ಎಂದರು.

ತಹಶೀಲ್ದಾರ್ ಶ್ರೀಯಾಂಕ ಧನಶ್ರೀ ಮಾತನಾಡಿ, ತಾಲ್ಲೂಕಿನಲ್ಲಿ ಮಳೆನೀರು ಮನೆಗಳಿಗೆ ನುಗ್ಗಿ ಅಪಾರ ಪ್ರಮಾಣದ ಯಾವ ಸಂಭವಿಸಿಲ್ಲ. ತಾಲ್ಲೂಕಿನಲ್ಲಿ ಒಟ್ಟು 11 ಮನೆಗಳು ನೆಲಕ್ಕುರುಳಿದ್ದು, ಅದರಲ್ಲಿ 8 ಮನೆಗಳಿಗೆ ಪರಿಹಾರ ನೀಡಲಾಗಿದೆ’ ಎಂದು ಸಚಿವರ ಗಮನಕ್ಕೆ ತಂದರು.

ಕ್ಷೇತ್ರಶಿಕ್ಷಣಾಧಿಕಾರಿ ಮಾರುತಿ ಹುಜರಾತಿ ಮಾತನಾಡಿ, ‘ಮಳೆಯಿಂದಾಗಿ ತಾಲ್ಲೂಕಿನ 11 ಶಾಲೆಗಳಿಗೆ ಅಲ್ಪಪ್ರಮಾಣದಲ್ಲಿ ಹಾನಿಯಾಗಿದೆ. ಈ ಕುರಿತು ವರದಿ ಸಲ್ಲಿಸಲಾಗಿದೆ. ದುರಸ್ತಿ ಕೆಲಸ ಮಾಡುವ ಪ್ರಯತ್ನ ಮಾಡಲಾಗುತ್ತಿದೆ’ ಎಂದರು.

ಉಪವಿಭಾಗಾಧಿಕಾರಿ ಪ್ರಭುರೆಡ್ಡಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ ಇನಾಮದಾರ, ಅನಸೂಯಾ ಹೂಗಾರ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂಜೀವಕುಮಾರ ಪಾಟೀಲ, ಸಿಡಿಪಿಒ ಅನುರಾಧ, ಕುಡಿವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಸುಭಾಷ, ಲೋಕಪಯೋಗಿ ಇಲಾಖೆಯ ಎಇಇ ಶಿವಶರಣಪ್ಪ ಜೇವರ್ಗಿ, ಮದನಿಕಾಂತ ಶೃಂಗೇರಿ, ಪರಮೇಶ್ವರ ಬಿರಾದಾರ, ಚನ್ನಪ್ಪ ರಾಯಣ್ಣನವರ್, ವಿಶ್ವನಾಥ ಮಾವಿನಗಿಡ, ಮದನಿಕಾಂತ ಶೃಂಗೇರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾರ್ಯನಿರ್ವಹಿಸಿ | ಡ್ರೋನ್ ಮೂಲಕ ಸಮೀಕ್ಷೆ ಕಾರ್ಯ | ತಾಲ್ಲೂಕಿನಲ್ಲಿ ಒಟ್ಟು 11 ಮನೆಗಳಿಗೆ ಹಾನಿ

ಅತಿವೃಷ್ಟಿ ಹಾನಿ ಕುರಿತು ತಾಲ್ಲೂಕು ಮಟ್ಟದ ಅಧಿಕಾರಿಗಳು ನಿರ್ಲಕ್ಷ್ಯವಹಿಸದೇ ಸಾರ್ವಜನಿಕರಿಗೆ ಸ್ಪಂದಿಸುವ ಕೆಲಸ ಮಾಡಬೇಕು
ಡಾ.ಶರಣಪ್ರಕಾಶ ಪಾಟೀಲ ಸಚಿ

ತಾಲ್ಲೂಕಿನಲ್ಲಿ 29304 ರೈತರು ಬೆಳೆವಿಮೆ ಮಾಡಿಸಿದ್ದಾರೆ. 7000ಕ್ಕೂ ಹೆಚ್ಚು ರೈತರು ದೂರು ಸಲ್ಲಿಸಿದ್ದಾರೆ
ಕೃಷಿ ಜಿಲಾಖೆ ಜಂಟಿ ನಿರ್ದೇಶಕ ಸಮದ್ ಪಟೇಲ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.