ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಂಗಭದ್ರಾ ನದಿಪಾತ್ರದಲ್ಲಿ ಪ್ರವಾಹ ಭೀತಿ

Last Updated 27 ಜುಲೈ 2021, 19:31 IST
ಅಕ್ಷರ ಗಾತ್ರ

ಕಲಬುರ್ಗಿ: ತುಂಗಭದ್ರಾ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಬಿಡುತ್ತಿರುವುದರಿಂದ ನದಿ ಪಾತ್ರದಲ್ಲಿ ಪ್ರವಾಹದ ಸ್ಥಿತಿ ತಲೆದೋರಿದೆ.

ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಸ್ಥಾನದ ಸ್ನಾನಘಟ್ಟಗಳನ್ನು ಬಂದ್‌ ಮಾಡಲಾಗಿದೆ.

ಆನಗೊಂದಿಯಲ್ಲಿರುವ ಶ್ರೀಕೃಷ್ಣದೇವರಾಯರ ಸಮಾಧಿ 63 ಕಾಲಿನ ಮಂಟಪ ಭಾಗಶಃ ಮುಳುಗಡೆಯಾಗಿದೆ. ವಿರುಪಾಪುರ ಗಡ್ಡೆಗೆ ಸಂಪರ್ಕ ಕಡಿತಗೊಂಡಿದೆ. ಸುರಕ್ಷತೆಯ ಕಾರಣ ಕಂಪ್ಲಿ-ಗಂಗಾವತಿ ಸೇತುವೆ ಮೇಲೆ ಸಂಚಾರ ಬಂದ್ ಮಾಡಲಾಗಿದೆ.

ಶ್ರೀರಾಘವೇಂದ್ರ ಸ್ವಾಮಿಗಳ ಶಿಷ್ಯ ಅಪ್ಪಣಾಚಾರ್ಯರ ನೆಲೆಯಾದ ರಾಯಚೂರು ತಾಲ್ಲೂಕಿನ ಯಲಿಬಿಚ್ಚಾಲಿ ಗ್ರಾಮದಲ್ಲಿಯ ರಾಘವೇಂದ್ರ ಸ್ವಾಮಿಗಳ ಏಕಶಿಲಾ ವೃಂದಾವನವು ಜಲಾವೃತವಾಗಿದೆ.

ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 3 ಲಕ್ಷಕ್ಕೂ ಅಧಿಕ ಕ್ಯುಸೆಕ್‌ ನೀರು ಬಿಡುತ್ತಿದ್ದು, ಯಾದಗಿರಿ ಜಿಲ್ಲೆಯಲ್ಲಿ ನದಿ ಅಪಾಯದ ಮಟ್ಟವನ್ನೂ ಮೀರಿ ಹರಿಯುತ್ತಿದೆ. ಶಹಾಪುರ ತಾಲ್ಲೂಕಿನ ಕೊಳ್ಳೂರು (ಎಂ) ಸೇತುವೆ ನಾಲ್ಕು ದಿನಗಳಿಂದ ಮುಳುಗಿದೆ. ಜಮೀನುಗಳಿಗೆ ನೀರು ನುಗ್ಗಿದ್ದು, ಬೆಳೆ ಜಲಾವೃತ್ತವಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT