ಕಲಬುರ್ಗಿ: ಜಿಲ್ಲೆಯಲ್ಲಿ ಮುಂದಿನ ಏಳು ದಿನಗಳವರೆಗೆ ಹೆಚ್ಚಿನ ಮಳೆ ಆಗುವ ಸಾಧ್ಯತೆ ಇದೆ. ಪ್ರವಾಹ ಬಂದರೆ ಬೋಟ್ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ತಿಳಿಸಿದರು.
'ಪ್ರವಾಹ ಬಂದರೆ ಸಮರ್ಥ ವಾಗಿ ಎದುರಿಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಜೊತೆಗೆ ಕಾರವಾರ ದಿಂದ ಬೋಟ್ ತರಿಸುವುದಕ್ಕೆ ತೀರ್ಮಾನಿಸಲಾಗಿದೆ' ಎಂದು ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
‘ಪ್ರವಾಹ ಬಂದ ಸಂದರ್ಭದಲ್ಲಿ ಜನರನ್ನ ಬೇರೆಡೆ ಸ್ಥಳಾಂತರಿಸಲು ಯೋಜಿಸಲಾಗಿದೆ. ದನ ಕರುಗಳಿಗೆ ಮೇವಿನ ವ್ಯವಸ್ಥೆ ಮಾಡಲಾಗುವುದು. ಮಹಾರಾಷ್ಟ್ರದ ವಿವಿಧ ಅಣೆಕಟ್ಟೆಗಳಿಂದ ನೀರು ಹರಿಸುವುದರ ಮೇಲೆ ನಿಗಾ ವಹಿಸಿದ್ದು, ನಮ್ಮ ಅಧಿಕಾರಿಗಳು ಮಹಾರಾಷ್ಟ್ರದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ’ ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.