- ‘ಮಕ್ಕಳೊಂದಿಗೆ ಊಟ ಸವಿದರು’
ಆಹಾರ ಆಯೋಗದ ಅಧ್ಯಕ್ಷ ಎಚ್.ಕೃಷ್ಣ ಅವರು ಅನ್ನಪೂರ್ಣ ಕ್ರಾಸ್ ಬಳಿ ಇರುವ ಸಮಾಜ ಕಲ್ಯಾಣ ಇಲಾಖೆಯ ಅಧೀನದ ವಸತಿ ನಿಲಯದ ಸಮುಚ್ಚಯಕ್ಕೆ ಭೇಟಿ ನೀಡಿ ವಸತಿ ನಿಲಯದ ಮಕ್ಕಳೊಂದಿಗೆ ಮಧ್ಯಾಹ್ನದ ಊಟ ಸವಿದರು. ಮಕ್ಕಳ ಸಮಸ್ಯೆಗಳಿಗೂ ಕಿವಿಯಾದರು. ನಿಲಯದಲ್ಲಿ ಸ್ವಚ್ಛತೆ ಗುಣಮಟ್ಟದ ಊಟ ಪೂರೈಕೆ ಮಾಡುತ್ತಿರುವುದಕ್ಕೆ ಮೆಚ್ಚುಗೆಯನ್ನೂ ವ್ಯಕ್ತಪಡಿಸಿದರು.