ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏ.1ರಿಂದ 30ರ ವರೆಗೆ ಕಾಲುಬಾಯಿ ಲಸಿಕಾ ಅಭಿಯಾನ|ತಪ್ಪದೇ ಲಸಿಕೆ ಹಾಕಿಸಿ:ಕಲಬುರಗಿ DC

Published 26 ಮಾರ್ಚ್ 2024, 15:40 IST
Last Updated 26 ಮಾರ್ಚ್ 2024, 15:40 IST
ಅಕ್ಷರ ಗಾತ್ರ

ಕಲಬುರಗಿ: ಜಾನುವಾರುಗಳಲ್ಲಿ ಕಂಡುಬರುವ ಕಾಲುಬಾಯಿ ರೋಗ ನಿಯಂತ್ರಣಕ್ಕೆ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಕಾಲುಬಾಯಿ ಲಸಿಕಾ ಅಭಿಯಾನವನ್ನು ಏಪ್ರಿಲ್‌ 1ರಿಂದ 30ರವರೆಗೆ  ಹಮ್ಮಿಕೊಳ್ಳಲಾಗಿದ್ದು, ರೈತರು ತಪ್ಪದೆ ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದರು.

ಇಲ್ಲಿನ ಜಿಲ್ಲಾಡಳಿತ ಕಚೇರಿಯಲ್ಲಿ ಮಂಗಳವಾರ ಐದನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಅವರು ಮಾತನಾಡಿದರು.

ಇಲಾಖೆಯ ಪಶುವೈದ್ಯರು, ಸಿಬ್ಬಂದಿ ಪ್ರತಿಯೊಂದು ಗ್ರಾಮದ ರೈತರ ಮನೆ ಬಾಗಿಲಿಗೆ ತೆರಳಿ ಜಾನುವಾರುಗಳಿಗೆ ಲಸಿಕೆ ಹಾಕಲಿದ್ದಾರೆ. ರೈತರು ತಮ್ಮ ಎತ್ತು, ಹೋರಿ, ಹಸು ಎಮ್ಮೆ, ಹಂದಿಗಳಿಗೆ ಕಾಲುಬಾಯಿ ರೋಗ ನಿಯಂತ್ರಣ ಲಸಿಕೆಯನ್ನು ತಪ್ಪದೇ ಹಾಕಿಸಬೇಕು. ನಿರ್ಲಕ್ಷ್ಯ ಮಾಡಿದ್ದಲ್ಲಿ ಕಾಯಿಲೆ ಹರಡುವ ಸಾಧ್ಯತೆಗಳಿದ್ದು, ಸಮಸ್ಯೆ ಗಂಭೀರವಾಗಲಿದೆ. ಜಾನುವಾರುಗಳಿಗೆ ಲಸಿಕೆ ಹಾಕಿಸಿ, ರೋಗದಿಂದ ರಕ್ಷಣೆ ಮಾಡಿಕೊಳ್ಳಬೇಕು ಎಂದು ಸಲಹೆ ನಿಡಿದರು.

ಕಾಲುಬಾಯಿ ರೋಗ ಕಂಡುಬಂದರೇ ಎತ್ತು, ಹೋರಿ, ಹಸು, ಎಮ್ಮೆ ಮತ್ತು ಹಂದಿಗಳ ಮಾಲೀಕರಿಗೆ ಆರ್ಥಿಕತೆ ನಷ್ಟ ಉಂಟು ಮಾಡಲಿದೆ. ರೋಗದಿಂದ ಗುಣಮುಖವಾದ ಜಾನುವಾರುಗಳಲ್ಲಿ ಗರ್ಭಕಟ್ಟುವಿಕೆಯಲ್ಲಿ ವಿಳಂಬ, ಸಾಮರ್ಥ್ಯ ನಷ್ಟ ಮತ್ತು ಹಾಲಿನ ಇಳುವರಿಯಲ್ಲಿ ಇಳಿಮುಖವಾಗುವ ಸಾಧ್ಯತೆ ಇರುತ್ತದೆ. ರೋಗದಿಂದ ಪೂರ್ಣ ಸುರಕ್ಷತೆಗಾಗಿ ಮೂರು ತಿಂಗಳು ಮೇಲ್ಪಟ್ಟ ಎಲ್ಲ ಜಾನುವಾರುಗಳಿಗೆ ಲಸಿಕೆ ಹಾಕುವುದು ಅತ್ಯವಿದೆ ಎಂದರು.

ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ. ಸಿರಾಜುದ್ದೀನ್ ಅವಟೆ, ತಾಲ್ಲೂಕು ಸಹಾಯಕ ನಿರ್ದೇಶಕ ಡಾ.ಸುಭಾಷ್ ಚಂದ್ರ ಟಕ್ಕಳಕಿ, ಜಿಲ್ಲಾ ಮುಖ್ಯ ಪಶುವೈದ್ಯಾಧಿಕಾರಿ (ತಾಂತ್ರಿಕ) ಡಾ. ಯಲ್ಲಪ್ಪ ಎಸ್.ಇಂಗಳೆ, ಜಿಲ್ಲಾ ನೋಡಲ್ ಅಧಿಕಾರಿ ಡಾ. ವೈಜನಾಥ ಮಮ್ಮಾಣಿ, ಡಾ.ಮಾರುತಿ ನಾಯಕ್, ಡಾ. ಕುಮಾರಪ್ಪ ಕೋಟೆ, ಡಾ.ಎಲ್ಲಪ್ಪ ಇಂಗಳ, ಡಾ. ಶಂಕರ್ ಕಣೆ, ಡಾ.ಶೋಭಾ ಸಜ್ಜನ್, ಡಾ. ಪ್ರಭು ಕಲ್ಲೂರ್, ಹಾಲು ಒಕ್ಕೂಟದ ಅಧಿಕಾರಿಗಳು ಹಾಜರಿದ್ದರು.

ಕುರಿ ಆಡು ಸಾಕಾಣಿಕೆ ತರಬೇತಿಗೆ ಅರ್ಜಿ

ಎಸ್‌ಬಿಐ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಏಪ್ರಿಲ್ 4 ರಿಂದ 13ರವರೆಗೆ ಕುರಿ ಮತ್ತು ಆಡು ಸಾಕಾಣಿಕೆ ತರಬೇತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಎಸ್‌ಬಿಐ ಆರ್‌ಸೆಟ್ ನಿರ್ದೇಶಕರು ತಿಳಿಸಿದ್ದಾರೆ. ಶುಲ್ಕವಿಲ್ಲದೆ ಊಟ ಹಾಗೂ ವಸತಿ ಸೌಲಭ್ಯ ನೀಡಲಾಗುತ್ತದೆ. 18ರಿಂದ 45 ವರ್ಷದೊಳಗಿನ ಬಿಪಿಎಲ್ ಅಂತ್ಯೋದಯ ಪಡಿತರ ನರೇಗಾ ಕಾರ್ಡ್ ಹೊಂದಿದ ನಿರುದ್ಯೋಗಿ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲಾತಿಗಳೊಂದಿಗೆ ಏ.2ರ ಒಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾಹಿತಿಗೆ ಮೊಬೈಲ್ 94489 94585 98867 81239 ಹಾಗೂ 99001 35705ಗೆ ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT