ಕಲಬುರಗಿ: ‘ವನ್ಯಜೀವಿಗಳ ಸಂರಕ್ಷಣೆ ಹಾಗೂ ಅರಣ್ಯ ಭೂಮಿ ಒತ್ತುವರಿಯನ್ನು ಪರಿಣಾಮಕಾರಿಯಾಗಿ ತಡೆಯಲು ಇಲಾಖೆಯಲ್ಲಿ ಖಾಲಿ ಇರುವ 6 ಸಾವಿರ ಕಾಯಂ ಹಾಗೂ ಗುತ್ತಿಗೆ ಆಧರಿತ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು’ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇತ್ತೀಚೆಗೆ 341 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. 540 ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ನಡೆಯುತ್ತಿದೆ’ ಎಂದರು.

‘ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಣ್ಯ ರಕ್ಷಕರಿಗೆ ಸಕಾಲಕ್ಕೆ ವೇತನ ಪಾವತಿಯಾಗದಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಪ್ರತಿ ತಿಂಗಳು 5ನೇ ತಾರೀಖಿನೊಳಗೆ ವೇತನ ಪಾವತಿ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ’ ಎಂದರು.

‘ರಾಜ್ಯದಲ್ಲಿ ಅನಾದಿ ಕಾಲದಿಂದಲೂ 2 ಲಕ್ಷ ಎಕರೆ ಭೂಮಿ ಒತ್ತುವರಿಯಾಗಿದೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದಾದ್ಯಂತ ಒಟ್ಟಾರೆ 6,231 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಲಾಗಿದೆ. ಇದರಿಂದ ₹ 10 ಸಾವಿರ ಕೋಟಿ ಮೌಲ್ಯದ ಅರಣ್ಯ ಭೂಮಿ ಇಲಾಖೆಯ ಸುಪರ್ದಿಗೆ ಬಂದಂತಾಗಿದೆ’ ಎಂದು ವಿವರಿಸಿದರು.

‘ಆನೆ, ಹುಲಿಗಳ ದಾಳಿಯಿಂದಾಗಿ ಪ್ರತಿ ವರ್ಷ 50ರಿಂದ 60 ಜನರು ಸಾವಿಗೀಡಾಗುತ್ತಿದ್ದಾರೆ. ಆನೆ–ಮಾನವ ಸಂಘರ್ಷ ತಪ್ಪಿಸಲು ಆನೆಗಳು ನಾಡಿಗೆ ಬರುವುದನ್ನು ತಪ್ಪಿಸಬೇಕಿದೆ. ಅದಕ್ಕಾಗಿ ಅರಣ್ಯದಲ್ಲಿ ಹೆಚ್ಚಿನ ಬಿದಿರು ಬೆಳೆಸಿ ಆನೆಗಳಿಗೆ ಆಹಾರ ಒದಗಿಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.