ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ: ಮಾಜಿ ಶಾಸಕ ನಾಗರೆಡ್ಡಿ ಪಾಟೀಲ ನಿಧನ

Published 6 ಮೇ 2024, 4:09 IST
Last Updated 6 ಮೇ 2024, 4:09 IST
ಅಕ್ಷರ ಗಾತ್ರ

ಸೇಡಂ (ಕಲಬುರಗಿ ಜಿಲ್ಲೆ): ಮಾಜಿ ಶಾಸಕ ನಾಗರೆಡ್ಡಿ ಪಾಟೀಲ (79) ಸೋಮವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.

ಮೃತರಿಗೆ ಇಬ್ಬರು ಪುತ್ರರು ಹಾಗೂ ಪುತ್ರಿಯರು ಇದ್ದಾರೆ. 1983-85ರ ಅವಧಿಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಶಾಸಕರಾಗಿದ್ದರು. ಆಗ ರಾಜ್ಯದಲ್ಲಿ ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿಯಾಗಿದ್ದರು.‌ ನಾಗರೆಡ್ಡಿ ಅವರು ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯ ಗೌರವ ಅಧ್ಯಕ್ಷರೂ ಆಗಿದ್ದರು.

ಅಂತ್ಯಕ್ರಿಯೆ ಮಧ್ಯಾಹ್ನ‌ ಸೇಡಂ ಪಟ್ಟಣದ ಆಶ್ರಯ ಕಾಲೊನಿ ಪಕ್ಕದ ಸ್ವಂತ ಹೊಲದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT