ಕಲಬುರಗಿ: ‘ನೆಟೆ ರೋಗದಿಂದ ಒಣಗುತ್ತಿರುವ ತೊಗರಿ ಬೆಳೆಯ ಸಮೀಕ್ಷೆ ಮಾಡಿ ರೈತರಿಗೆ ಸೂಕ್ತ ಪರಿಹಾರ, ಬೆಳೆ ವಿಮೆ ಮಂಜೂರು ಮಾಡಬೇಕು’ ಎಂದು ಆಳಂದ ಮಾಜಿ ಶಾಸಕ ಸುಭಾಷ್ ಆರ್. ಗುತ್ತೇದಾರ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಬಿತ್ತನೆಯಾದ 6 ಲಕ್ಷ ಹೆಕ್ಟೇರ್ಗಿಂತಲೂ
ಹೆಚ್ಚಿನ ಪ್ರದೇಶದಲ್ಲಿ 2 ಲಕ್ಷ ಹೆಕ್ಟೇರ್ ಬೆಳೆ ನೆಟೆರೋಗದಿಂದ ಒಣಗಿದೆ. ಗೊಬ್ಬರ, ಔಷಧ, ಬಿತ್ತನೆ
ಬೀಜ, ಕೂಲಿಗಾಗಿ ರೈತರು ಸಾವಿರಾರು ರೂಪಾಯಿ ಖರ್ಚು ಮಾಡಿದ್ದಾರೆ. ವ್ಯಯ ಮಾಡಿದ ಹಣ ವಾಪಸ್ ಬರುವುದಿಲ್ಲ ಎಂಬ ಆತಂಕ ರೈತರಲ್ಲಿ ಮೂಡಿದೆ. ರಾಜ್ಯ ಸರ್ಕಾರ ಕೂಡಲೇ ತೊಗರಿ ಬೆಳೆಗಾರರ ನೆರವಿಗೆ ಬರಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕು. ಅದರ ಜೊತೆಗೆ ಬೆಳೆ ವಿಮೆಯೂ ಮಂಜೂರು ಮಾಡಬೇಕು. ಪ್ರತಿ ಕ್ವಿಂಟಲ್ ತೊಗರಿಗೆ ₹12 ಸಾವಿರ ಬೆಂಬಲ ಬೆಲೆ ನಿಗದಿಪಡಿಸಿ
ಮುಖ್ಯಮಂತ್ರಿಗಳು ₹1 ಸಾವಿರ ಪ್ರೋತ್ಸಾಹ ಧನ ನೀಡಬೇಕು. ತೊಗರಿ ಮಂಡಳಿ ಬಲವರ್ಧನೆಗಾಗಿ ಕನಿಷ್ಠ ₹30 ಕೋಟಿ ಅನುದಾನ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.