ಮಂಗಳವಾರ, ಜನವರಿ 19, 2021
17 °C

ಸೇಡಂ ಮಾಜಿ ಶಾಸಕ ಬಸವಂತರೆಡ್ಡಿ ಪಾಟೀಲ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಸೇಡಂನ ಮಾಜಿ ಶಾಸಕ  ಬಸವಂತರೆಡ್ಡಿ ಪಾಟೀಲ‌ ಮೋತಕಪಲ್ಲಿ (88) ಅನಾರೋಗ್ಯದಿಂದ ಸೋಮವಾರ ತಡರಾತ್ರಿ ನಿಧನರಾದರು. ಅವರಿಗೆ ಪುತ್ರ, ಪುತ್ರಿ ಇದ್ದಾರೆ.

ಸೇಡಂ ತಾಲ್ಲೂಕಿನ ಮೋತಕಪಲ್ಲಿ ಗ್ರಾಮದ ಇವರು, ಜನತಾ ಪಕ್ಷದಿಂದ ರಾಜಕೀಯ ಪ್ರವೇಶಿಸಿದ್ದರು. 1988ರಲ್ಲಿ ಮುಧೋಳ ಕ್ಷೇತ್ರದಿಂದ ಜಿಲ್ಲಾ ಪರಿಷತ್‌ಗೆ ಆಯ್ಕೆಯಾಗಿದ್ದರು.

ಕಾಂಗ್ರೆಸ್‌ನಿಂದ 1989ರಲ್ಲಿ ಸೇಡಂ ಕ್ಷೇತ್ರದಿಂದ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದರು. 1994ರಲ್ಲಿ ಪರಾಭವಗೊಂಡಿದ್ದರು. ಮತ್ತೆ ಕಾಂಗ್ರೆಸ್ ಪಕ್ಷದಿಂದ 1999ರಲ್ಲಿ ಶಾಸಕರಾಗಿ ಪುನರಾಯ್ಕೆಯಾಗಿ ಎಸ್.ಎಂ. ಕೃಷ್ಞ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದರು.

ಮೋತಕಪಲ್ಲಿ ಗ್ರಾಮದ ಜಮೀನಿನಲ್ಲಿ ಜ.5ರಂದು ಮಂಗಳವಾರ ಮಧ್ಯಾಹ್ನ 3ಕ್ಕೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.