ಗುರುವಾರ , ಆಗಸ್ಟ್ 18, 2022
25 °C

ಪಿಎಸ್ಐ ನೇಮಕಾತಿ ಅಕ್ರಮ: ಮಾಜಿ ಸೈನಿಕನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಮಾಜಿ ಸೈನಿಕನನ್ನು ಸೋಮವಾರ ಬಂಧಿಸಿದ್ದಾರೆ.

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ಸರೂರ ಗ್ರಾಮದ ವಿಶ್ವನಾಥ ತಿಮ್ಮಪ್ಪ‌ ಮಾನೆ ಬಂಧಿತ ಆರೋಪಿ.

ಕಲಬುರಗಿಯ ನೊಬೆಲ್ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಬ್ಲೂಟೂತ್‌ ಉಪಕರಣ ಬಳಸಿದ್ದ ಬಗ್ಗೆ ಸಿಐಡಿ ಅಧಿಕಾರಿಗಳು ಮಾಹಿತಿ ಪಡೆದಿದ್ದರು. ಈಗಾಗಲೇ ಬಂಧನದಲ್ಲಿರುವ ಪ್ರಕರಣದ ಪ್ರಮುಖ ಕಿಂಗ್ ಪಿನ್ ಆರ್.ಡಿ. ಪಾಟೀಲ ಅಕ್ರಮವೆಸಗಲು ನೆರವಾಗಿದ್ದರು ಎಂದು ಮೂಲಗಳು ತಿಳಿಸಿವೆ.

ವಿಶ್ವನಾಥ ಮಾನೆ ಮಾಜಿ ಸೈನಿಕರ ಕೋಟಾದಲ್ಲಿ ಪ್ರಥಮ ಸ್ಥಾನದಲ್ಲಿ ಪಿಎಸ್ಐ ಸ್ಪರ್ಧಾತ್ಮಕ ‌ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು.

ಹಾಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಬಂಧಿಸಿದ್ದ ಸಿಐಡಿ ಇದೇ ಮೊದಲ ಬಾರಿಗೆ ಮಾಜಿ ಸೈನಿಕನನ್ನು ಬಂಧಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು