ಮಂಗಳವಾರ, ಸೆಪ್ಟೆಂಬರ್ 21, 2021
21 °C

ಕಲಬುರ್ಗಿ: ಟ್ಯಾಂಕರ್– ಕಾರಿನ ನಡುವೆ ಡಿಕ್ಕಿ, ನಾಲ್ವರು ಯುವಕರು ಸ್ಥಳದಲ್ಲೇ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ನಗರದ ಹೊರವಲಯದ ಕೋಟನೂರು (ಡಿ) ಗ್ರಾಮದ ಬಳಿ ರಾತ್ರಿ ಟ್ಯಾಂಕರ್ ಮತ್ತು ಕಾರಿನ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ನಗರದ ನಾಲ್ವರು ಮೃತಪಟ್ಟಿದ್ದಾರೆ.

ರಾಹುಲ್ (25), ಖಾಸಿಂ (26) ಉಲ್ಲಾಸ್ (26) ಮೃತಪಟ್ಟಿದ್ದು, ಇನ್ನೋರ್ವ ಮೃತನ ಗುರುತು ಪತ್ತೆ ಮಾಡಲಾಗುತ್ತಿದೆ.

ಕಾರಿನಲ್ಲಿದ್ದ ಮತ್ತೊಬ್ಬರಿಗೆ ಗಂಭೀರ ಗಾಯವಾಗಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜೇವರ್ಗಿಯಿಂದ ಕಾರು ನಗರಕ್ಕೆ ಬರುತ್ತಿತ್ತು. ನಗರದಿಂದ ತೆರಳುತ್ತಿದ್ದ ಟ್ಯಾಂಕರ್ ಕಾರಿಗೆ ಡಿಕ್ಕಿ ಹೊಡೆಯಿತು ಎಂದು ಪೊಲೀಸರು ‌ತಿಳಿಸಿದ್ದಾರೆ.

ಕಲಬುರ್ಗಿ ಸಂಚಾರಿ ಠಾಣೆ 2ರಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು