ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ, ಪಿಯು ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಬಸ್‌

Last Updated 13 ಜೂನ್ 2020, 15:51 IST
ಅಕ್ಷರ ಗಾತ್ರ

ಕಲಬುರ್ಗಿ: ಈ ಬಾರಿಯ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಉಚಿತ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಜೂನ್‌ 25ರಿಂದ ಜುಲೈ 4ರವರೆಗೆ ನಡೆಯಲಿವೆ. ವಿದ್ಯಾರ್ಥಿಗಳು ಬೇರೆಬೇರೆ ಕಡೆ ಇರುವ ಪರೀಕ್ಷಾ ಕೇಂದ್ರಗಳಿಗೆ ಹೋಗಬೇಕಾಗುತ್ತದೆ.‌ ಅವರನ್ನು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ಮುಟ್ಟಿಸಬೇಕು ಎಂಬ ಉದ್ದೇಸದಿಂದ ಸಾರಿಗೆ ಸಂಸ್ಥೆ ವಾಹನ ಕಲ್ಪಿಸಲು ಮುಂದಾಗಿದೆ. ವಿದ್ಯಾರ್ಥಿಗಳನ್ನು ಅವರ ವಾಸಸ್ಥಳಗಳಿಂದ ಹತ್ತಿಸಿಕೊಂಡು ಪರೀಕ್ಷಾ ಕೇಂದ್ರಕ್ಕೆ ಬಿಡುವುದು ಮತ್ತು ಅಲ್ಲಿಂದ ಮರಳಿ ಮನೆಗಳಿಗಳಿಗೆ ತಲುಪಿಸಲಾಗುವುದು.

ಪರೀಕ್ಷಾ ಪ್ರವೇಶ ಪತ್ರಗಳನ್ನೂ ತೋರಿಸುವ ಮೂಲಕ ಈ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳೂ ಸಂಚರಿಸಲಿವೆ. ಈ ಕುರಿತು ಎಲ್ಲ ವಿಭಾಗಗಳಿಗೆ ಮತ್ತು ಘಟಕ ವ್ಯವಸ್ಥಾಪಕರಿಗೆ ಸೂಚನೆಯನ್ನು ನೀಡಲಾಗಿರುತ್ತದೆ.

ಅದೇ ರೀತಿ, ಜೂನ್‌ 18ರಂದು ನಡೆಯುವ ದ್ವಿತೀಯ ಪಿಯು ಇಂಗ್ಲಿಷ್‌ ಪರೀಕ್ಷೆಗೂ ವಿದ್ಯಾರ್ಥಿಗಳಿಗೆ ಬಸ್‌ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದು ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.

ಸಂಚಾರ ಅಧಿಕಾರಿಗಳ ಸಂಪರ್ಕ ಸಂಖ್ಯೆಗಳು ಇಂತಿವೆ.

ಕಲಬುರ್ಗಿ ವಿಭಾಗ-1 (7760992102), ವಿಭಾಗ–2 (7760984086), ಬೀದರ್‌ ವಿಭಾಗ (7760992202), ಯಾದಗಿರಿ ವಿಭಾಗ (7760992452), ರಾಯಚೂರು ವಿಭಾಗ (7760992352), ಬಳ್ಳಾರಿ ವಿಭಾಗ (7760992152), ಕೊಪ್ಪಳ ವಿಭಾಗ (7760992402), ಹೊಸಪೇಟೆ ವಿಭಾಗ (7760992302), ವಿಜಯಪುರ ವಿಭಾಗ (7760992252).

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT