ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಡೇರದ ಉಚಿತ ಬಸ್ ಪಾಸ್‌ ಭರವಸೆ: ಎಬಿವಿಪಿ ಪ್ರತಿಭಟನೆ

Last Updated 6 ಜುಲೈ 2018, 14:34 IST
ಅಕ್ಷರ ಗಾತ್ರ

ಕಲಬುರ್ಗಿ: ಸಮ್ಮಿಶ್ರ ಸರ್ಕಾರದ ಬಜೆಟ್‌ನಲ್ಲಿ ಉಚಿತ ಬಸ್ ಪಾಸ್‌ ಬಗ್ಗೆ ಪ್ರಸ್ತಾಪ ಮಾಡದಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಜಿಲ್ಲಾ ಘಟಕದ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ಮಾಡಿದರು.

ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ವಿದ್ಯಾರ್ಥಿಗಳಿಗೆ ಅವಶ್ಯವಿರುವ ಉಚಿತ ಬಸ್ ಪಾಸ್ ವಿತರಣೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ಉನ್ನತೀಕರಣ, ಖಾಲಿಯಿರುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕದ ಬಗ್ಗೆ ಪ್ರಸ್ತಾಪಿಸಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಪಾಲಿಗೆ ಇದೊಂದು ನಿರಾಶದಯ ಬಜೆಟ್ ಆಗಿದೆ ಎಂದು ಆರೋಪಿಸಿದರು.

ಎಬಿವಿಪಿ ಜಿಲ್ಲಾ ಸಂಚಾಲಕ ಕಿರಣ ಬಿರಾದಾರ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT