ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಚಿತ ಆರೋಗ್ಯ ಶಿಬಿರ ಇಂದು

Published 23 ಡಿಸೆಂಬರ್ 2023, 14:52 IST
Last Updated 23 ಡಿಸೆಂಬರ್ 2023, 14:52 IST
ಅಕ್ಷರ ಗಾತ್ರ

ಕಲಬುರಗಿ: ನಗರದ ಹೈಕೋರ್ಟ್‌ ಸಮೀಪದ ಅಕ್ಕಮಹಾದೇವಿ ಕಾಲೊನಿಯಲ್ಲಿರುವ ಶಾಂತಾ ಆಸ್ಪತ್ರೆಯಲ್ಲಿ ಭಾನುವಾರ ಆರೋಗ್ಯ ಹಾಗೂ ಕಣ್ಣು ತಪಾಸಣೆ ಉಚಿತ ಶಿಬಿರ ಹಮ್ಮಿಕೊಳ್ಳಲಾಗಿದೆ.

ಬೆಳಿಗ್ಗೆ 11ರಿಂದ ಮಧ್ಯಾಹ್ನ 3 ಗಂಟೆ ತನಕ ಶಿಬಿರ ನಡೆಯಲಿದೆ. ಶಿಬಿರದಲ್ಲಿ ವಿವಿಧ ರೋಗಗಳನ್ನು ತಪಾಸಣೆ ನಡೆಸಲಾಗುವುದು. ಸಾರ್ವಜನಿಕರು ಶಿಬಿರದ ಲಾಭ ಪಡೆಯಬೇಕು ಎಂದು ಆಸ್ಪತ್ರೆಯ ಅಧ್ಯಕ್ಷ ಡಾ. ಸಂಜೀವ ಪಾಟೀಲ, ನಿರ್ದೇಶಕಿ ಡಾ. ಅಂಬಿಕಾ ಎಸ್‌.ಪಾಟೀಲ ಪ್ರಕಟಣೆಯಲ್ಲಿ ಕೋರಿದ್ದಾರೆ.

ಉಚಿತ ಆರೋಗ್ಯ ಶಿಬಿರ ನಾಳೆ

ಕಲಬುರಗಿ: ಮಾಜಿ ಮುಖ್ಯಮಂತ್ರಿ ದಿ. ಧರ್ಮಸಿಂಗ್ ಜನ್ಮದಿನ ಹಾಗೂ ಕ್ರಿಸ್‌ಮಸ್‌ ಹಬ್ಬದ ಅಂಗವಾಗಿ ನಗರದ ಕಾಕಡೆ ಚೌಕ್‌ ಸಮೀಪದ ಭಾಗ್ಯಜ್ಯೋತಿ ವೃದ್ಧಾಶ್ರಮದಲ್ಲಿ ಡಿ. 25ರಂದು ಸಂಜೆ 6 ಗಂಟೆಗೆ ಆರೋಗ್ಯ ಉಚಿತ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ.

ಹಳೇ ಜೇವರ್ಗಿ ರಸ್ತೆಯ ಶರಣಬಸವೇಶ್ವರ ಆಸ್ಪತ್ರೆಯ ಡಾ. ಸುಭಾಷ ಪಾಟೀಲ ಹಾಗೂ ವೈದ್ಯ ಸ್ನೇಹಿತರಿಂದ ಆಯೋಜಿಸಿರುವ ಆರೋಗ್ಯ ತಪಾಸಣೆ ಶಿಬಿರವನ್ನು ಪ್ರಭಾವತಿ ಧರ್ಮಸಿಂಗ್ ಉದ್ಘಾಟಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT