ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಿತೀಯ ಪಿಯು ಪರೀಕ್ಷೆ: ಉಚಿತ ಪ್ರಯಾಣಕ್ಕೆ ಅವಕಾಶ

Last Updated 26 ಫೆಬ್ರುವರಿ 2020, 12:51 IST
ಅಕ್ಷರ ಗಾತ್ರ

ಕಲಬುರ್ಗಿ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾರ್ಚ್ 4ರಿಂದ ನಡೆಯಲಿದೆ. ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರ ತೋರಿಸಿ, ಪರೀಕ್ಷಾ ಕೇಂದ್ರಗಳವರೆಗೆ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಜಹೀರಾ ನಸೀಂ ತಿಳಿಸಿದ್ದಾರೆ.

ಮಾರ್ಚ್ 4ರಿಂದ 23ರವರೆಗೆ ನಡೆಯುವ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಹಾಗೂ ಪರೀಕ್ಷೆಯಿಂದ ಹಿಂದಿರುವಾಗ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಸಂಸ್ಥೆಯ ನಗರ, ಹೊರ ವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ಎಲ್ಲ ವಿಭಾಗದ ಮತ್ತು ಘಟಕ ವ್ಯವಸ್ಥಾಪಕರಿಗೆ ಸೂಚನೆ ನೀಡಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕು. ಈ ಕುರಿತು ವಿದ್ಯಾರ್ಥಿಗಳು ತಮಗೆ ಏನಾದರೂ ತೊಂದರೆಯಾಗಿದ್ದಲ್ಲಿ ಸಂಬಂಧಪಟ್ಟ ವಿಭಾಗಗಳ ಸಂಚಾರ ಅಧಿಕಾರಿಗಳನ್ನು ಸಂಪರ್ಕಿಸಬೇಕು.

ಸಂಚಾರ ಅಧಿಕಾರಿಗಳ ಮೊಬೈಲ್ ಸಂಖ್ಯೆಗಳ ವಿವರ: ಕಲಬುರ್ಗಿ ವಿಭಾಗ–1ರ ಸಂಖ್ಯೆ 77609 92102, ಕಲಬುರ್ಗಿ ವಿಭಾಗ–2ರ ಸಂಖ್ಯೆ 77609 84086, ಬೀದರ ವಿಭಾಗ–77609 92202, ಯಾದಗಿರಿ ವಿಭಾಗ–77609 92452, ರಾಯಚೂರು ವಿಭಾಗ–77609 92352, ಬಳ್ಳಾರಿ ವಿಭಾಗ–77609 92152, ಕೊಪ್ಪಳ ವಿಭಾಗ–77609 92402, ಹೊಸಪೇಟೆ ವಿಭಾಗ–77609 92302 ಹಾಗೂ ವಿಜಯಪುರ ವಿಭಾಗ–77609 92252ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT