ಬುಧವಾರ, ಸೆಪ್ಟೆಂಬರ್ 22, 2021
23 °C

ನೀರಾವರಿ ಯೋಜನೆಗೆ ₹ 3 ಸಾವಿರ ಕೋಟಿ: ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ₹ 3 ಸಾವಿರ ಕೋಟಿ ವೆಚ್ಚದಲ್ಲಿ ಕಲಬುರ್ಗಿ, ಬೀದರ್ ಜಿಲ್ಲೆಗೆ ಉಪಯೋಗವಾಗುವ ಕೃಷಿ ಮತ್ತು ಕಾಗಿಣಾ ನದಿಗೆ ಹೊಂದಿಕೊಂಡು 10 ಏತ ನೀರಾವರಿ ಯೋಜನೆ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ ಎಂದು ‌ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ‌ಪ್ರಕಟಿಸಿದರು.

ನಗರದ ಪೊಲೀಸ್ ‌ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ‌ದಿನಾಚರಣೆಗೆ ಚಾಲನೆ ‌ನೀಡಿ ಅವರು ಮಾತನಾಡಿದರು.

ಮುಂಬರುವ ‌ನಾಲ್ಕು ತಿಂಗಳಲ್ಲಿ ಬಸವ ಕಲ್ಯಾಣ ಪ್ರಾಧಿಕಾರದ ಆಶ್ರಯದಲ್ಲಿ ಅನುಭವ ಮಂಟಪ ‌ಕಾರ್ಯಾರಂಭ ಮಾಡಲಾಗುವುದು. ಕಲಬುರ್ಗಿಯಲ್ಲಿ ರೈಲ್ವೆ ವಿಭಾಗೀಯ ‌ಕಚೇರಿ ಸ್ಥಾಪನೆ ಸಂಬಂಧ ಕೇಂದ್ರದೊಂದಿಗೆ ವ್ಯವಹರಿಸಲಾಗುತ್ತದೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು