ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕನ್ನಡ ಚಟುವಟಿಕೆಗೆ ವಿಶೇಷ ಅನುದಾನ ನೀಡಿ’

ಖಜೂರಿಯಲ್ಲಿ ಗಡಿನಾಡು ಕನ್ನಡ ಸಾಹಿತ್ಯ ಸಮ್ಮೇಳನ ಸಂಭ್ರಮ; ಗಮನ ಸೆಳೆದ ಮೆರವಣಿಗೆ
Last Updated 1 ಡಿಸೆಂಬರ್ 2020, 3:04 IST
ಅಕ್ಷರ ಗಾತ್ರ

ಆಳಂದ: ರಾಜ್ಯದ ಗಡಿ ಭಾಗದಲ್ಲಿ ಕನ್ನಡ ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆ ಕೈಗೊಳ್ಳಲು ರಾಜ್ಯ ಸರ್ಕಾರ ವಿಶೇಷ ಅನುದಾನ ನೀಡಬೇಕು ಎಂದು ಖಜೂರಿಯ ಮುರುಘೇಂದ್ರ ಕೋರಣೇಶ್ವರ ಸ್ವಾಮೀಜಿ ಒತ್ತಾಯಿಸಿದರು.

ತಾಲ್ಲೂಕಿನ ಗಡಿ ಗ್ರಾಮ ಖಜೂರಿಯಲ್ಲಿ ವಿಶ್ವಜ್ಯೋತಿ ಪ್ರತಿಷ್ಠಾನದ ವತಿಯಿಂದ ಸೋಮವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಗಡಿನಾಡು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಅವರು ಭಾಷಣ ಮಾಡಿದರು.

ಶ್ರೀಮಂತ ಸಂಸ್ಕೃತಿ, ಪರಂಪರೆಯುಳ್ಳ ಕನ್ನಡ ಭಾಷೆಯನ್ನು ಬದುಕಿನ ಭಾಷೆಯಾಗಿಸಬೇಕು. ಗಡಿ ಭಾಗದ ಕನ್ನಡ ಶಾಲೆ, ರಸ್ತೆ, ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಿದರೆ ಕನ್ನಡ ಭಾಷೆ ಸಮೃದ್ಧವಾಗಿ ಬೆಳೆಯುತ್ತದೆ ಎಂದರು.

ಕನ್ನಡ ಪ್ರಾಧಿಕಾರ, ನಿಗಮ–ಮಂಡಳಿಗಳು ಬೆಂಗಳೂರು, ಮೈಸೂರು ಭಾಗಕ್ಕೆ ಸೀಮಿತವಾಗಬಾರದು. ಗಡಿ ಭಾಗದಲ್ಲಿ ಅವುಗಳನ್ನು ಸಕ್ರಿಯಗೊಳಿಸಬೇಕು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿವೃಷ್ಟಿಯಿಂದ ರೈತರ ಬೆಳೆ ಹಾನಿಯಾಗಿದೆ. ಆದರೆ ರೈತರಿಗೆ ಬೆಳೆ ಹಾನಿ ಪರಿಹಾರ ನೀಡುವಲ್ಲಿ ವಿಳಂಬ ಮಾಡುತ್ತಿರುವುದು ಸರಿಯಲ್ಲ ಎಂದರು.

ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಸದಸ್ಯ ಹರ್ಷಾನಂದ ಗುತ್ತೇದಾರ, ಕಲ್ಯಾಣ ಕರ್ನಾಟಕ ಭಾಗದ ಗಡಿಯಲ್ಲಿನ ಭಾಷಿಕರ ನಡುವೆ ಅನ್ಯೋನ್ಯ ಸಂಬಂಧಗಳಿವೆ. ಮರಾಠಿ, ತೆಲಗು ಭಾಷಿಕರೊಂದಿಗೆ ಯಾವುದೇ ದ್ವೇಷ ಭಾವನೆ ಇಲ್ಲ. ಪರಸ್ಪರ ಕೊಡು–ಕೊಳ್ಳುವಿಕೆ ಇದೆ ಎಂದರು.

ಗಡಿ ಭಾಗದ ಭಾಷಿಕರು ಕನ್ನಡ ಶಿಕ್ಷಣದತ್ತ ಒಲವು ಬೆಳೆಸಿಕೊಂಡಿದ್ದಾರೆ. ಅವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ನೀಡುವ ಮೀಸಲಾತಿ ಪ್ರಮಾಣ ಹೆಚ್ಚಿಸುವ ಮೂಲಕ ಪ್ರೋತ್ಸಾಹ ನೀಡಬೇಕು. ಈ ಭಾಗದ ಮೂಲಸೌಲಭ್ಯಕ್ಕಾಗಿ ಹೆಚ್ಚಿನ ಅನುದಾನ ನೀಡಬೇಕು ಎಂದು ಒತ್ತಾಯಿಸಿದರು.

ಡಿಸಿಸಿ ಬ್ಯಾಂಕ್ ನಿರ್ದೇಶಕ ಅಶೋಕ ಸಾವಳೇಶ್ವರ, ಪ್ರತಿಷ್ಠಾನದ ಅಧ್ಯಕ್ಷ ವಿಜಯಕುಮಾರ ತೆಗಲತಿಪ್ಪಿ, ಶಿವಾನಿ ಬಂಡೆ ಮಾತನಾಡಿ, ಕನ್ನಡ ನಾಡು ನುಡಿ ಬಗ್ಗೆ ಅಭಿಮಾನ ಬೆಳೆಸಲು ಈ ಸಮ್ಮೇಳನ ಸ್ಫೂರ್ತಿಯಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಮಲಾಜಿ, ಪುರಸಭೆ ಅಧ್ಯಕ್ಷೆ ರಾಜಶ್ರೀ ಖಜೂರಿ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಗುರುನಾಥ ಪಾಟೀಲ, ಮುಖಂಡ ಅಶೋಕ ಗುತ್ತೇದಾರ್, ಕಲ್ಯಾಣರಾವ ಶೀಲವಂತ, ಮಲ್ಲಿಕಾರ್ಜುನ ಕಂದಗೋಳೆ, ಆನಂದರಾವ ಪಾಟೀಲ, ಅಪ್ಪಾಸಾಬ ಗುಂಡೆ, ಭೀಮರಾವ ಡಗೆ, ಸಿದ್ದರಾಮಪ್ಪ ಪಾಟೀಲ ಇದ್ದರು.

ಪ್ರಭುಲಿಂಗ ಮೂಲಗೆ ನಿರೂಪಿಸಿದರು. ಸುಜಾತಾ, ಸಿದ್ದರಾಮ ಹಂಚನಾಳ ನಾಡಗೀತೆ ಹಾಡಿದರು. ಮಂಜುನಾಥ ಕಂದಗೋಳೆ ಸ್ವಾಗತಿಸಿದರು.

ಸಮ್ಮೇಳನ್ನೂ ಮುನ್ನ ಮುಖ್ಯರಸ್ತೆಯಲ್ಲಿನ ವಿವೇಕಾನಂದ ವೃತ್ತದಿಂದ ಸಮ್ಮೇಳನಾಧ್ಯಕ್ಷರನ್ನು ಸಾರೋಟದಲ್ಲಿ ಮೆರವಣಿಗೆ ಮೂಲಕ ವೇದಿಕೆಗೆ ಕರೆ ತರಲಾಯಿತು. ತಾಲ್ಲೂಕು ಪಂಚಾಯಿತಿ ಸದಸ್ಯ ಶಿವಪ್ಪ ವಾರಿಕ ಮೆರವಣಿಗೆಗೆ ಚಾಲನೆ ನೀಡಿದರು. ಕನ್ನಡ ಧ್ವಜಗಳು, ಕನ್ನಡಪರ ಘೋಷಣೆ, ನೃತ್ಯ, ಕುಣಿತ ಹಾಗೂ ಮಕ್ಕಳ ಛದ್ಮವೇಷ ಗಮನ ಸೆಳೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT