ಭಾನುವಾರ, ಸೆಪ್ಟೆಂಬರ್ 19, 2021
24 °C

ಕಲಬುರ್ಗಿ: ಅತಿ ಹೆಚ್ಚು ಮತ ಪಡೆದು ಬೀಗಿದ ಗಂಗಮ್ಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಬಂಡಾಯ ಅಭ್ಯರ್ಥಿ ಹೆಚ್ಚು ಮತ ಪಡೆಯುವ ಭೀತಿಯ ಮಧ್ಯೆಯೂ ಐದನೇ ವಾರ್ಡ್‌ನ ಬಿಜೆಪಿ ಅಭ್ಯರ್ಥಿ ಗಂಗಮ್ಮ ಬಸವರಾಜ ಬಿರಾದಾರ (ಮುನ್ನಳ್ಳಿ) ಅವರು 4106 ಮತಗಳನ್ನು ಪಡೆಯುವ ಮೂಲಕ ಈ ಚುನಾವಣೆಯಲ್ಲಿ ಅತಿ ಹೆಚ್ಚು ಮತ ಪಡೆದ ಶ್ರೇಯವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಜೊತೆಗೆ ಅತಿ ಹೆಚ್ಚು ಗೆಲುವಿನ ಅಂತರವನ್ನೂ (3238) ಇವರು ಸಾಧಿಸಿದ್ದಾರೆ. ಕಳೆದ ಬಾರಿ ಪಾಲಿಕೆ ಸದಸ್ಯರಾಗಿದ್ದ ಶಿವಾನಂದ ಪಾಟೀಲ ಅಷ್ಠಗಿ ಅವರು ತಮ್ಮ ಪತ್ನಿ ಮಲ್ಲಮ್ಮ ಅವರನ್ನು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದರು. ಆದರೆ, ಹೀನಾಯವಾಗಿ ಪರಾಭವಗೊಂಡಿದ್ದಾರೆ. 

ಅಷ್ಠಗಿ ಅವರು ಪತ್ನಿಗೆ ಟಿಕೆಟ್ ನಿರಾಕರಿಸಿ ಗಂಗಮ್ಮ ಅವರಿಗೆ ಹಂಚಿಕೆ ಮಾಡಿದ್ದ ಕ್ರೆಡೆಲ್ ಅಧ್ಯಕ್ಷ ಚಂದು ಪಾಟೀಲ ಒಂದರ್ಥದಲ್ಲಿ ತಾವೇ ಅಭ್ಯರ್ಥಿಯಾಗಿ ಕಣಕ್ಕಿಳಿದಂತೆ ಭಾವಿಸಿ ಕಾರ್ಯತಂತ್ರ ರೂಪಿಸಿದ್ದರು. ಸಚಿವ ಬಿ. ಶ್ರೀರಾಮುಲು, ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಕರೆಸಿ ಪ್ರಚಾರ ನಡೆಸಿದ್ದರು. 

ಮತ್ತೊಂದೆಡೆ 46ನೇ ವಾರ್ಡ್‌ ಬಿಜೆಪಿ ಅಭ್ಯರ್ಥಿ ವಿಶಾಲ ದರ್ಗಿ ಕೇವಲ 10 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ವಿಶಾಲ 1500 ಮತಗಳನ್ನು ಪಡೆದರೆ, ಕಾಂಗ್ರೆಸ್‌ನ ಸಂಜಯ್ ಮಾಕಲ್ 1490 ಮತಗಳನ್ನು ಪಡೆದು ಅಲ್ಪ ಅಂತರದಲ್ಲಿ ಪರಾಭವಗೊಂಡರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು