ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜಿ.ಪಂ, ತಾ.ಪಂ ಚುನಾವಣೆಗೆ ಸಿದ್ಧರಾಗಿ: ಬಾಲರಾಜ್ ಗುತ್ತೇದಾರ

Published 20 ಜೂನ್ 2024, 7:26 IST
Last Updated 20 ಜೂನ್ 2024, 7:26 IST
ಅಕ್ಷರ ಗಾತ್ರ

ಕಲಬುರಗಿ: ‘ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ಎದುರಿಸಲು ಜೆಡಿಎಸ್ ಪಕ್ಷದ ಕಾರ್ಯಕರ್ತರು ಬೂತ್‌ ಮಟ್ಟದಿಂದ ಸಿದ್ಧರಾಗಬೇಕು’ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಬಾಲರಾಜ್ ಗುತ್ತೇದಾರ ಹೇಳಿದರು.

ನಗರದ ಜೆಡಿಎಸ್ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ, ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ ಆಡಳಿತದ ಅವಧಿಯಲ್ಲಿ ರೈತರ ಸಾಲಮನ್ನಾ, ಗ್ರಾಮ ವಾಸ್ತವ್ಯ, ನೀರಾವರಿ ಯೋಜನೆ ಸೇರಿದಂತೆ ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದಾರೆ. ಪಕ್ಷದ ಕಾರ್ಯಕ್ರಮಗಳ ಬಗ್ಗೆ ಜನರಿಗೆ ತಿಳಿಹೇಳುವ ಮೂಲಕ ಬೂತ್‌ ಮಟ್ಟದಿಂದ ಪಕ್ಷವನ್ನು ಸಂಘಟಿಸಬೇಕು’ ಎಂದು ಹೇಳಿದರು.

ಇದೇ ವೇಳೆ ಮುಂಬರುವ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆ, ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ, ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಗೆ ಸಂಬಂಧಿಸಿದ ಎಲ್ಲ ವಿಧಾನಸಭೆ ಮತಕ್ಷೇತ್ರದಲ್ಲಿ ಎನ್‌ಡಿಎ ಪಕ್ಷದ ಅಭ್ಯರ್ಥಿ ಪಡೆದ ಮತಗಳಿಕೆ, ಪಕ್ಷವನ್ನು ಸಂಘಟಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಜೆಡಿಎಸ್ ಪಕ್ಷದ ಕಾರ್ಯಾಧ್ಯಕ್ಷ ದೊಡ್ಡಪ್ಪಗೌಡ ಎಸ್. ಪಾಟೀಲ ನರಿಬೋಳ, ಮುಖಂಡರಾದ ಕೃಷ್ಣಾರೆಡ್ಡಿ, ಸಂಜೀವನ ಯಾಕಾಪುರ, ನಾಸಿರ್ ಹುಸೇನ್ ಉಸ್ತಾದ್, ವಿಶ್ವನಾಥ ನಾಡಗೌಡ, ಹಣಮಂತ ಸನಗುಂದಿ, ಹಣಮಂತ ಕಂದಹಳ್ಳಿ, ಸಿದ್ದಣ್ಣ ಪಾಟೀಲ, ಸುನಿಲ್ ಗಾಜರೆ, ಸಂಜು ಮಡಕಿ, ಪ್ರವೀಣ್ ಜಾಧವ್‌, ಭೀಮರಾಯ ಜನಿವಾರ, ಜಮೀಲ್, ಕಲೀಂ ಬಾಂಡ್, ರವಿಶಂಕರ್ ರೆಡ್ಡಿ, ಪಾರ್ವತಿ ಪುರಾಣಿಕ್ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಕಾರ್ಖಾನೆ ಪ್ರಾರಂಭಿಸಲು ಆದ್ಯತೆ ನೀಡುವಂತೆ ಪಕ್ಷದ ನಾಯಕರೊಂದಿಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಪತ್ರ ಸಲ್ಲಿಸಲಾಗುವುದು
ಬಾಲರಾಜ್ ಗುತ್ತೇದಾರ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT