ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಜಲಿ ಕುಟುಂಬಕ್ಕೆ ₹1 ಕೋಟಿ ಪರಿಹಾರ ನೀಡಿ: ಮಲ್ಲಣ್ಣಪ್ಪ ಸ್ವಾಮೀಜಿ

Published 19 ಮೇ 2024, 14:46 IST
Last Updated 19 ಮೇ 2024, 14:46 IST
ಅಕ್ಷರ ಗಾತ್ರ

ಕಲಬುರಗಿ: ‘ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಕೋಲಿ ಕಬ್ಬಲಿಗ ಸಮಾಜದ ಅಂಜಲಿ ಅಂಬಿಗೇರ ಅವರನ್ನು ಮನೆಗೆ ನುಗ್ಗಿ ಕೊಲೆ ಮಾಡಲಾಗಿದೆ. ಇದು ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆಯಾಗಿದೆ. ಕೊಲೆ ಆರೋಪಿಗೆ ಕಠಿಣವಾದ ಶಿಕ್ಷೆಯಾಗಬೇಕು. ಅಂಜಲಿ ಅಂಬಿಗೇರ್ ಪರಿವಾರಕ್ಕೆ ರಾಜ್ಯ ಸರ್ಕಾರ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕು. ಆಕೆಯ ಕುಟುಂಬದ ಒಬ್ಬರಿಗೆ ಉದ್ಯೋಗ ಕೊಡಬೇಕು‘ ಎಂದು ತೊನಸನಹಳ್ಳಿ ಎಸ್ ಅಲ್ಲಮಪ್ರಭು ಪೀಠದ ಮಲ್ಲಣಪ್ಪ ಸ್ವಾಮೀಜಿ ಆಗ್ರಹಿಸಿದ್ದಾರೆ.

‘ಈ ಕೊಲೆಗೆ ಪೊಲೀಸ್ ಇಲಾಖೆ ನಿರ್ಲಕ್ಷ್ಯವೇ ಪ್ರಮುಖ ಕಾರಣವಾಗಿದೆ. ಅಂಜಲಿ ಪರಿವಾರದವರು ಇಂತಹ ಘಟನೆಯ ಬಗ್ಗೆ ಪೋಲೀಸ್ ಇಲಾಖೆಗೆ ಮುಂಚಿತವಾಗಿ ತಿಳಿಸಿದ್ದರೂ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ. ಇಂತಹ ಘಟನೆಗಳು ರಾಜ್ಯದಲ್ಲಿ ಅವ್ಯಾಹತವಾಗಿ ನಡೆಯುತ್ತಿವೆ. ಹೀಗಾಗಿ ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಬೇಕು. ಅದರಲ್ಲೂ ಕೋಲಿ ಸಮಾಜದವರ ಮೇಲೆ ದೌರ್ಜನ್ಯಗಳು ಬಹಳ ನಡೆಯುತ್ತಿವೆ. ಹೀಗೆ ಮುಂದುವರಿದರೆ ಮುಂಬರುವ ದಿನಗಳಲಿ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕಪಾಠ ಕಲಿಸಲಾಗುವುದು‘ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT