ಮೂಲ ಸೌಕರ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ

7

ಮೂಲ ಸೌಕರ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ

Published:
Updated:
ಬಾಲಕರ ವಸತಿ ನಿಲಯಕ್ಕೆ ಮೂಲ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಜೈ ಕನ್ನಡಿಗರ ಸೇನೆ ಕಾರ್ಯಕರ್ತರು ಕಲಬುರ್ಗಿಯಲ್ಲಿ ಶುಕ್ರವಾರ ಪ್ರತಿಭಟನೆ ಮಾಡಿದರು

ಕಲಬುರ್ಗಿ: ಇಲ್ಲಿಯ ಪಂಚಶೀಲ ನಗರದಲ್ಲಿರುವ ಬಾಲಕರ ವಸತಿ ನಿಲಯಕ್ಕೆ ಮೂಲ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಜೈ ಕನ್ನಡಿಗರ ಸೇನೆ ಕಾರ್ಯಕರ್ತರು ನಗರದ ಸಮಾಜ ಕಲ್ಯಾಣ ಇಲಾಖೆ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ಮಾಡಿದರು.

ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಸೌಲಭ್ಯವಿಲ್ಲದ್ದರಿಂದ ವಿದ್ಯಾರ್ಥಿಗಳು ಪ್ರತಿನಿತ್ಯ ಪರದಾಡುತ್ತಿದ್ದಾರೆ. ಬಾಡಿಗೆ ಕಟ್ಟಡದಲ್ಲಿ ಹಾಸ್ಟೆಲ್ ನಡೆಸಲಾಗುತ್ತಿದ್ದು, ಕಟ್ಟಡ ಬೀಳುವ ಸ್ಥಿತಿಯಲ್ಲಿದೆ. ಶುದ್ಧ ಕುಡಿಯುವ ನೀರು ಪೂರೈಕೆ ಇಲ್ಲದ್ದರಿಂದ ವಿದ್ಯಾರ್ಥಿಗಳು ಕ್ಯಾನ್‌ಗಳಲ್ಲಿ ನೀರು ತಂದು ಕುಡಿಯುವ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಊಟದ ವ್ಯವಸ್ಥೆ ಸರಿಯಾಗಿಲ್ಲ. ಅರೆಬರೆ ಬೆಂದ ಆಹಾರವನ್ನು ನೀಡಲಾಗುತ್ತದೆ. ಈ ಬಗ್ಗೆ ಅಡುಗೆ ಸಿಬ್ಬಂದಿಯನ್ನು ಪ್ರಶ್ನಿಸಿದರೆ, ವಾರ್ಡನ್ ಅವರನ್ನು ಕೇಳಿ ಎಂದು ಹೇಳುತ್ತಾರೆ. ಆದ್ದರಿಂದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಸಂಸ್ಥಾಪಕ ಅಧ್ಯಕ್ಷ ದತ್ತು ಎಚ್.ಭಾಸಗಿ, ಗೌರವ ಅಧ್ಯಕ್ಷ ಜಗನ್ನಾಥ ಸೂರ್ಯವಂಶಿ, ರಾಜ್ಯ ಘಟಕದ ಉಪಾಧ್ಯಕ್ಷ ರಾಜಕುಮಾರ ಆರ್.ಕಣ್ಣೂರ, ರುಕ್ಕಪ್ಪ ಟಿ.ಕಾಂಬಳೆ, ನಾರಾಯಣ ಜೆ.ರೆಡ್ಡಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !