ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿ | ರೈತರಿಗೆ ಸಾಲ ನೀಡಲು ಆಗ್ರಹ

Last Updated 19 ಜೂನ್ 2020, 13:44 IST
ಅಕ್ಷರ ಗಾತ್ರ

ಕಲಬುರ್ಗಿ: ‘ಕಲಬುರ್ಗಿ– ಯಾದಗಿರಿ ಜಿಲ್ಲಾ ಸಹಕಾರ ಬ್ಯಾಂಕ್‌ನಲ್ಲಿ ಸಾಲ ಮನ್ನಾ ಆದ ರೈತರಿಗೆ ಕೂಡಲೇ ಮರು ಸಾಲ ನೀಡಬೇಕು’ ಎಂದು ಜೈ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಮಂಜುನಾಥ ಬಿ. ಮಹಾಗರಗಿ ಆಗ್ರಹಿಸಿದರು.

‘ಈಗಾಗಲೇ ಮುಂಗಾರು ಬಿತ್ತನೆ ಪ್ರಾರಂಭಗೊಂಡಿದ್ದು, ರೈತರಿಗೆ ಬೀಜ, ಗೊಬ್ಬರ ಹಾಗೂ ಇತರೆ ಖರ್ಚುಗಳಿಗೆ ಹಣದ ಬೇಕಿದೆ. ಇಂಥ ವೇಳೆಯಲ್ಲೂ ಸಾಲ ನೀಡದೇ ರೈತರನ್ನು ಸತಾಯಿಸಿದರೆ ಬ್ಯಾಂಕಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಬೇಕಾಗುತ್ತದೆ’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ಸಹಕಾರ ಬ್ಯಾಂಕಿನಿಂದ ಪಡೆದ ಸಾಲ ಮನ್ನಾ ಮಾಡಿದ್ದರು. ಮನಾ ಫಲಾನುಭವಿಗಳಿಗೆ ಈಗ ಮರುಸಾಲ ನೀಡುತ್ತಿಲ್ಲ. ಹಣವನ್ನು ಅಪೆಕ್ಸ್ ಬ್ಯಾಂಕ್ ವಸೂಲಿ ಮಾಡಿಕೊಂಡಿದೆ. ಹೀಗಾಗಿ ರೈತರಿಗೆ ಸಾಲ ನೀಡಲು ಬ್ಯಾಂಕಿನಲ್ಲಿ ಹಣ ಇಲ್ಲ ಎಂದು ಕುಂಟು ನೆಪ ಹೇಳುತ್ತಿದ್ದಾರೆ’ ಎಂದೂ ದೂರಿದರು.

ವೇದಿಕೆ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ ಪಟ್ಟಣಶೆಟ್ಟಿ, ಪ್ರವೀಣ ಕುಲರ್ಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT