ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಖಲೆ ಇಲ್ಲದ ₹ 6.37 ಲಕ್ಷ ಮೊತ್ತದ ಚಿನ್ನಾಭರಣ ವಶ

Published 28 ಮಾರ್ಚ್ 2024, 14:35 IST
Last Updated 28 ಮಾರ್ಚ್ 2024, 14:35 IST
ಅಕ್ಷರ ಗಾತ್ರ

ಕಲಬುರಗಿ: ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 114.72 ಗ್ರಾಂ ಚಿನ್ನ ಹಾಗೂ 3.2 ಕೆ.ಜಿ. ಬೆಳ್ಳಿಯನ್ನು ಜಿಲ್ಲೆಯ ಕಲಬುರಗಿ-ಯಾದಗಿರಿ ಗಡಿಯ ನಾಲವಾರ ಚೆಕ್ ಪೋಸ್ಟ್ ಬಳಿ ಗುರುವಾರ ವಶಕ್ಕೆ ಪಡೆಯಲಾಗಿದೆ‌.

ಇವುಗಳ ಒಟ್ಟಾರೆ ಮೌಲ್ಯ ₹ 6,37,670 ಆಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಫೌಜಿಯಾ ತರನ್ನುಮ್ ಬಿ. ಅವರು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ ಪ್ರಯುಕ್ತ ಅಕ್ರಮ ತಡೆಯಲು ಜಿಲ್ಲೆಯ ಗಡಿಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. ಚುನಾವಣೆ ಘೋಷಣೆಯಾದ ಬಳಿಕ ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ದಾಖಲೆ ಇಲ್ಲದ ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT