ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಜಾರ ಶಾಸಕರಿಗೆ ಸಚಿವ ಸ್ಥಾನ ನೀಡದೆ ಅನ್ಯಾಯ: ಗೋರ ಸೇನಾ

Published 29 ಮೇ 2023, 14:07 IST
Last Updated 29 ಮೇ 2023, 14:07 IST
ಅಕ್ಷರ ಗಾತ್ರ

ಚಿತ್ತಾಪುರ: ವಿಧಾನಸಭೆ ಚುನಾವಣೆಯಲ್ಲಿ ಬಂಜಾರ ಸಮುದಾಯದ ಶೇ 90 ರಷ್ಟು ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ ಬೆಂಬಲಿಸಿ ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ. ಆದರೆ, ಕಾಂಗ್ರೆಸ್ ಸರ್ಕಾರದಲ್ಲಿ ಬಂಜಾರ ಸಮುದಾಯದ ಶಾಸಕರಿಗೆ ಸಚಿವ ಸ್ಥಾನ ನೀಡಿದೇ ಅನ್ಯಾಯ ಮಾಡಲಾಗಿದೆ ಎಂದು ಗೋರ ಸೇನಾ ಜಿಲ್ಲಾಧ್ಯಕ್ಷ ಅಶ್ವಥ್ ರಾಠೋಡ್, ತಾಲ್ಲೂಕು ಅಧ್ಯಕ್ಷ ಮನೋಜ ರಾಠೋಡ್ ಆಕ್ರೋಶ ವ್ಯಕ್ತ ಮಾಡಿದರು.

ಪಟ್ಟಣದಲ್ಲಿ ಭಾನುವಾರ ಜಂಟಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಂಜಾರ ಸಮುದಾಯದ 50 ಲಕ್ಷ ಜನಸಂಖ್ಯೆಯಿದೆ. ಒಳ ಮೀಸಲಾತಿ ವಿರುದ್ಧ ಹೋರಾಟ ನಡೆಸಿದ ಬಂಜಾರ ಜನರು, 'ಬಿಜೆಪಿ ಹಠಾವೊ ತಾಂಡಾ ಬಚಾವೊ' ಆಂದೋಲನ ನಡೆಸಿ ಕಾಂಗ್ರೆಸ್ ಪಕ್ಷಕ್ಕೆ ಮತ ಚಲಾಯಿಸಿದ್ದಾರೆ. ಹಾವೇರಿ ಶಾಸಕ ರುದ್ರಪ್ಪ ಲಮಾಣಿ, ವಿಧಾನ ಪರಿಷತ್ ಸದಸ್ಯ ಪ್ರಕಾಶ ರಾಠೋಡ್ ಅವರಲ್ಲಿ ಒಬ್ಬರಿಗಾದರೂ ಸಚಿವ ಸ್ಥಾನ ನೀಡಬೇಕಿತ್ತು ಎಂದು ಅವರು ಹೇಳಿದರು.

ಕಾಂಗ್ರೆಸ್ ಮುಖಂಡರು ಮಾತೆತ್ತಿದ್ದರೆ ಸಾಮಾಜಿಕ ನ್ಯಾಯ ಎಂದು ಹೇಳುತ್ತಾರೆ. ಬಂಜಾರ ಜನರಿಗೆ ಸಚಿವ ಸ್ಥಾನ ನೀಡದಿರುವ ನಿಮ್ಮ ಸಾಮಾಜಿಕ ನ್ಯಾಯ ಎಲ್ಲಿಗೆ ಹೋಗಿದೆ ಎಂದು ಅವರು ಪ್ರಶ್ನಿಸಿದರು.

ಚಿಂಚೋಳಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಸುಭಾಷ್ ರಾಠೋಡ್ ಅವರು ಅಲ್ಪ ಮತಗಳಿಂದ ಸೋಲು ಅನುಭವಿಸಿದ್ದಾರೆ. ಸರ್ಕಾರವು ಸುಭಾಷ ರಾಠೋಡ ಅವರನ್ನು ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಅವರು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಗೋರ ಸೇನಾ ಪದಾಧಿಕಾರಿ ವಿಜಯ ಪವಾರ, ಶಿವರಾಮ ಚವಾಣ್, ಸಿದ್ರಾಮ ರಾಠೋಡ್, ಸಂಜಯ ಕಾರ್ತಿಕ್, ಸಂತೋಷ ರಾಠೋಡ್, ಬಿಪಿನಸಿಂಗ್ ರಾಠೋಡ್, ಸುನಿಲ್ ಚವಾಣ್, ವಿನೋದ ಚವಾಣ್ ಸೇರಿದಂತೆ ಹಲವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT