ಮಂಗಳವಾರ, ಫೆಬ್ರವರಿ 7, 2023
27 °C
ಕ್ರೀಡಾಕೂಟ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಿನ್ನೆಲೆ

ಕಲಬುರಗಿ: ನೌಕರರ ಸಂಘದ ಪದಾಧಿಕಾರಿಗಳ ಪೂರ್ವಭಾವಿ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರಗಿ: ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಪ್ರಯುಕ್ತ ಶುಕ್ರವಾರ ನಗರದ ನೌಕರರ ಭವನದಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಲೇಂಗಟಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಸಭೆ ನಡೆಯಿತು.

ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಬರುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಯಶಸ್ಸಿಗೆ ಎಲ್ಲಾ ನೌಕರರು, ಪದಾಧಿಕಾರಿಗಳು ಶ್ರಮಿಸಬೇಕು. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿ‌ಯು‌ಸಿಯಲ್ಲಿ ಹೆಚ್ಚಿನ ಅಂಕ ಪಡೆದ ಕ್ರಮವಾಗಿ 132 ಮತ್ತು 66 ನೌಕರರ ಮಕ್ಕಳಿಗೆ ತಲಾ ₹ 500 ನಗದು ಬಹುಮಾನ, ಪ್ರಶಸ್ತಿ ಪತ್ರ ನೀಡಿ ಸತ್ಕರಿಸಲಾಗುವುದು. ಮುಂದಿನ ದಿನಗಳಲ್ಲಿ ಸಂಘದಿಂದ ಗಡಿನಾಡು ಉತ್ಸವ ಆಯೋಜನೆಗೆ ಚಿಂತನೆ ನಡೆದಿದೆ ಎಂದರು.

ಜಿಲ್ಲಾ ಮಟ್ಟದ ನೌಕರರ ಕ್ರೀಡಾಕೂಟ ಕಲಬುರಗಿ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ‌ ವಿಜೃಂಭಣೆಯಿಂದ ಆಯೋಜಿಸಲು ಸಭೆಯಲ್ಲಿ ಒಕ್ಕೂರಲಿನಿಂದ ನಿರ್ಧರಿಸಲಾಗಿದ್ದು, ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರಿಗೆ ಟಿ ಶರ್ಟ್, ಕ್ಯಾಪ್ ವಿತರಿಸಲಾಗುವುದು. ಊಟ, ಉಪಾಹಾರ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ. ಹೀಗಾಗಿ‌ ಜಿಲ್ಲೆಯ ನೌಕರ ಬಾಂಧವರು https://forms.gle/VnCLyuvvX2cLAsx28 ಲಿಂಕ್ ಮೂಲಕ ಹೆಸರು ನೊಂದಾಯಿಸಬೇಕೆಂದು ತಿಳಿಸಿದರು.

ನೌಕರರ ಸಂಘದ ಗೌರವಾಧ್ಯಕ್ಷ ಅಬ್ದುಲ್ ಅಜೀಂ, ಹಿರಿಯ ಉಪಾಧ್ಯಕ್ಷರಾದ ನಿಜಲಿಂಗಪ್ಪ ಕೊರಳ್ಳಿ, ಬಾಬು ಮೌರ್ಯ, ಕಾರ್ಯಾಧ್ಯಕ್ಷ ಚಂದ್ರಕಾಂತ ಏರಿ, ಖಜಾಂಚಿ ಸತೀಶ ಸಜ್ಜನ್, ತಾಲ್ಲೂಕು ಘಟಕದ ಅಧ್ಯಕ್ಷರಾದ ಶಿವಶಂಕ್ರಯ್ಯ ಮಠಪತಿ, ಈರಣ್ಣಾ ಕೆಂಭಾವಿ ಕಾರ್ಯಕ್ರಮ ಯಶಸ್ಸಿಗೆ‌ ಸಲಹೆ ನೀಡಿದರು.

ಸಭೆಯಲ್ಲಿ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗಾಯತ್ರಿ ಬಿ., ಸಂಘದ ಪದಾಧಿಕಾರಿಗಳಾದ ಹಣಮಂತರಾಯ ಗೊಳಸಾರ, ಆರ್.ಎಸ್.ಪಲ್ಲೇದ್, ಕ್ರೀಡಾ ಕಾರ್ಯದರ್ಶಿ ಜಮೀಲ್, ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಬಳೂಂಡಗಿ, ಮಿಟ್ಟೆಸಾಬ್ ಮುಲ್ಲಾ, ಧರೆಪ್ಪಗೌಡ, ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಜಿ.ಸೇವಂತಾ ಚವ್ಹಾಣ, ಕಾರ್ಯದರ್ಶಿ ಸಾವಿತ್ರಿ ಪಾಟೀಲ ಸೇರಿದಂತೆ ಜಿಲ್ಲಾ ಕಾರ್ಯಕಾರಿಣಿಯ ಅನೇಕ ಪದಾಧಿಕಾರಿಗಳು ಭಾಗವಹಿಸಿದ್ದರು.

ಕಾರ್ಯದರ್ಶಿ ಸಿದ್ದಲಿಂಗಯ್ಯ ಮಠಪತಿ ಸ್ವಾಗತಿಸಿ ನಿರೂಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.