ಕಲಬುರಗಿ: ‘ರಾಜ್ಯ ಸರ್ಕಾರವು ಕೆಪಿಎಸ್ ಮ್ಯಾಗ್ನೆಟ್ ಶಾಲೆ ಎಂಬ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಸಂಪೂರ್ಣವಾಗಿ ಮುಚ್ಚಲು ಸಿದ್ಧತೆ ನಡೆಸುತ್ತಿದೆ. ‘ಗುಣಮಟ್ಟ’ ಮತ್ತು ‘ಮಾದರಿ ಶಾಲೆಗಳು’ ಎಂಬ ಆಕರ್ಷಕ ಪದಗಳ ಹಿಂದೆ, ಉಚಿತ ಮತ್ತು ಸಾರ್ವತ್ರಿಕ ಶಿಕ್ಷಣ ನಾಶಪಡಿಸುವ ಪ್ರಯತ್ನ ಅಡಗಿದೆ’ ಎಂದು ಎಐಡಿಎಸ್ಒ ಜಿಲ್ಲಾ ಕೌನ್ಸಿಲ್ ಅಧ್ಯಕ್ಷ ತುಳಜರಾಮ ಎನ್.ಕೆ. ಆರೋಪಿಸಿದರು.

ಸರ್ಕಾರಿ ಶಾಲೆಗಳ ಉಳಿವಿಗಾಗಿ ನಗರದ ತಿಮ್ಮಾಪುರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಅವರು, ‘ನಗರದ ಎಂ.ಪಿ.ಎಸ್ ಜೇವರ್ಗಿ ಕಾಲೊನಿ ರಸ್ತೆಯ ಶಾಲೆಯನ್ನು ಮ್ಯಾಗ್ನೆಟ್ ಶಾಲೆಯೆಂದು ಗುರುತಿಸಲಾಗಿದೆ. ಬ್ರಹ್ಮಪುರ ಏರಿಯಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಕೆ.ಪಿ.ಎಸ್ಗೆ ವಿಲೀನಗೊಳಿಸಿ ಮುಚ್ಚಲಾಗುತ್ತಿದೆ. ಸರ್ಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ ಎಂಬ ಶಿಕ್ಷಣ ಸಚಿವರ ಮಾತು ಕೇವಲ ಜನರನ್ನು ದಾರಿ ತಪ್ಪಿಸುವುದಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಐಡಿಎಸ್ಒ ಜಿಲ್ಲಾ ಕೌನ್ಸಿಲ್ ಕಾರ್ಯದರ್ಶಿ ವೆಂಕಟೇಶ ದೇವದುರ್ಗ ಮಾತನಾಡಿದರು. ಎಐಡಿಎಸ್ಒ ಜಿಲ್ಲಾ ಉಪಾಧ್ಯಕ್ಷ ಗೋವಿಂದ ಯಳವರ, ಸದಸ್ಯರಾದ ಬಾಬು ಪವರ್, ಯುವರಾಜ ರಾಠೋಡ್ ಹಾಗೂ ಪೋಷಕರಾದ ಶ್ರೀಮಂತ, ಪ್ರಶಾಂತ, ಚೆಂದಮ್ಮ ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.