ಭಾನುವಾರ, ಜುಲೈ 3, 2022
24 °C

ನಾವು ಸತ್ಯದ ಪರವಾಗಿದ್ದೇವೆ: ಗೃಹಸಚಿವ ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಕಲಬುರ್ಗಿ: ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಿಸಿದೆ ಎನ್ನಲಾದ ಸಿ.ಡಿ.‌ ಪ್ರಕರಣ ಕುರಿತ ‌ಎಸ್ಐಟಿ ತನಿಖೆ ನ್ಯಾಯಸಮ್ಮತವಾಗಿ ನಡೆಯಲಿದೆ.

ಈ ಬಗ್ಗೆ ಯುವತಿಗೆ ಅನಗತ್ಯ ಸಂದೇಹ ಬೇಡ ಎಂದು ಗೃಹಸಚಿವ ಬಸವರಾಜ ‌ಬೊಮ್ಮಾಯಿ ಸ್ಪಷ್ಟಪಡಿಸಿದರು.

ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯ ಸಮ್ಮತ ಕೆಲಸ ಮಾಡಲು ಸೂಚನೆ ನೀಡಿದ್ದೇನೆ. ನಾವು ಸತ್ಯದ ಪರವಾಗಿದ್ದೇವೆ.

ಯಾರ ಪರ ಅಥವಾ ವಿರೋಧವಾಗಿ ಇಲ್ಲ. ಅಲ್ಲಿ ನಡೆಯುವ ವಿದ್ಯಮಾನಗಳ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಏನಾದರೂ ಇದ್ದರೆ ಎಸ್.ಐ.ಟಿ ಅವರೇ ಹೇಳುತ್ತಾರೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು