ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅದ್ಧೂರಿ ಸ್ವಾಗತ

Last Updated 2 ಅಕ್ಟೋಬರ್ 2021, 9:13 IST
ಅಕ್ಷರ ಗಾತ್ರ

ಕಲಬುರ್ಗಿ: ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಬಳಿಕ ಮೊದಲ ಬಾರಿಗೆ ನಗರಕ್ಕೆ ಬಂದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ‌ನಗರದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿದರು.

ಬೆಂಗಳೂರಿನಿಂದ ವಿಮಾನ ನಿಲ್ದಾಣದ ‌ಮೂಲಕ ಬೆಳಿಗ್ಗೆ 11.45ಕ್ಕೆ ಬಂದ ಖರ್ಗೆ ಅವರನ್ನು ವಿಮಾನ ನಿಲ್ದಾಣದಲ್ಲಿ ಪಕ್ಷದ ವಕ್ತಾರ, ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ, ಜೇವರ್ಗಿ ‌ಶಾಸಕ ಡಾ. ಅಜಯ್ ಸಿಂಗ್, ಅಫಜಲಪುರ ಶಾಸಕ‌ ಎಂ.ವೈ. ಪಾಟೀಲ,‌ ಕಲಬುರ್ಗಿ ದಕ್ಷಿಣ ಶಾಸಕಿ ಕನೀಜ್ ಫಾತಿಮಾ, ಮಾಜಿ ಶಾಸಕ ಬಿ.ಆರ್. ಪಾಟೀಲ, ಮುಖಂಡ ಅಲ್ಲಮಪ್ರಭು ಪಾಟೀಲ, ಜಿಲ್ಲಾ ಕಾಂಗ್ರೆಸ್ ‌ಅಧ್ಯಕ್ಷ‌ ಜಗದೇವ ಗುತ್ತೇದಾರ ಸೇರಿದಂತೆ ಹಲವರು ಖರ್ಗೆ ಅವರನ್ನು ಸ್ವಾಗತಿಸಿದರು.

ವಿಮಾನ ನಿಲ್ದಾಣದಿಂದ ನಗರಕ್ಕೆ ಬರುವವರೆಗೂ ರಸ್ತೆ ಮಧ್ಯದಲ್ಲಿ ಬೃಹತ್ ಜೆಸಿಬಿಗಳ ಮೂಲಕ ಭಾರಿ ಗಾತ್ರದ ಹಾರಗಳನ್ನು ಖರ್ಗೆ ಅವರಿಗೆ ಹಾಕಿದರು. ನಗರದಾದ್ಯಂತ ಸ್ವಾಗತ ಕಮಾನುಗಳನ್ನು ಅಳವಡಿಸಲಾಗಿದೆ.

ತೆರೆದ ವಾಹನದಲ್ಲಿ ಕುಳಿತ ಮಲ್ಲಿಕಾರ್ಜುನ ಖರ್ಗೆ ಅವರು ರಸ್ತೆ ಅಕ್ಕಪಕ್ಕದಲ್ಲಿ ನಿಂತಿದ್ದ ಸಾರ್ವಜನಿಕರು‌‌ ಹಾಗೂ ಬೆಂಬಲಿಗರತ್ತ ಕೈಬೀಸಿದರು.

ಮೆರವಣಿಗೆ ಸಂದರ್ಭದಲ್ಲಿ ಸೇಡಂ ರಸ್ತೆಯಲ್ಲಿ ಇತರೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ಇದರಿಂದಾಗಿ ಮೆರವಣಿಗೆಯು ಜೈಭವಾನಿ ಸಭಾಂಗಣತ್ತ ತೆರಳಿದ ಬಳಿಕವೂ ವಾಹನ ಸಂಚಾರದಲ್ಲಿ ವ್ಯತ್ಯಯವಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT