ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಂದಿಕೂರ: ಸ್ಮಶಾನ ಭೂಮಿ ಮಂಜೂರಾತಿಗೆ ಒತ್ತಾಯ

ಗ್ರಾ.ಪಂ. ಅಧ್ಯಕ್ಷೆ ನೇತೃತ್ವದಲ್ಲಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ
Last Updated 3 ಮಾರ್ಚ್ 2021, 2:46 IST
ಅಕ್ಷರ ಗಾತ್ರ

ಕಲಬುರ್ಗಿ: ತಾಲ್ಲೂಕಿನ ನಂದಿಕೂರ ಗ್ರಾಮದಲ್ಲಿ ಸ್ಮಶಾನ ಭೂಮಿ ಇಲ್ಲದೇ ಇರುವುದರಿಂದ ಸಾಕಷ್ಟು ತೊಂದರೆಯಾಗಿದ್ದು, ಕೂಡಲೇ ಸ್ಮಶಾನ ಭೂಮಿ ಮಂಜೂರು ಮಾಡಬೇಕು ಎಂದು ಒತ್ತಾಯಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದಿನೇಶ ದೊಡ್ಡಮನಿ ನೇತೃತ್ವದಲ್ಲಿ ಗ್ರಾಮಸ್ಥರು ಮಂಗಳವಾರ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಯಾರಾದರೂ ಮೃತಪಟ್ಟರೆ ಅವರ ಅಂತ್ಯಸಂಸ್ಕಾರ ಮಾಡುವುದೇ ದೊಡ್ಡ ಸವಾಲಾಗಿದೆ. ಕೆಲ ತಿಂಗಳ ಹಿಂದೆ ನಂದಿಕೂರ ತಾಂಡಾದಲ್ಲಿ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯೊಬ್ಬನ ಶವವನ್ನು ಬಸ್ ನಿಲ್ದಾಣದಲ್ಲಿ ಇಟ್ಟು ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಭೂಸ್ವಾಧೀನ ಮಾಡಿಕೊಂಡು ಸ್ಮಶಾನ ಭೂಮಿ ನೀಡುವುದಾಗಿ ಉಪವಿಭಾಗಾಧಿಕಾರಿ ಭರವಸೆ ನೀಡಿದ್ದರು. ಆದರೆ, ಇನ್ನೂ ಪ್ರಕ್ರಿಯೆ ನಡೆದಿಲ್ಲ. ಶೀಘ್ರ ಭೂಮಿ ಮಂಜೂರು ಮಾಡುವ ಮೂಲಕ ಗ್ರಾಮದಲ್ಲಿ ಮೃತಪಟ್ಟವರ ಗೌರವಯುತ ಅಂತ್ಯಸಂಸ್ಕಾರಕ್ಕೆ ಅವಕಾಶ ಕೊಡಬೇಕು. ಇಲ್ಲದಿದ್ದರೆ ಮುಂದೆ ಯಾರಾದರೂ ಮೃತಪಟ್ಟರೆ ತಹಶೀಲ್ದಾರ್ ಕಚೇರಿ ಎದುರು ಹೆಣ ಇಟ್ಟು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ತಹಶೀಲ್ದಾರ್ ಪ್ರಕಾಶ ಕುದರಿ ಮನವಿ ಸ್ವೀಕರಿಸಿದರು.

ನಂದಿಕೂರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶಿವಪುತ್ರ ಮಾಲಿಪಾಟೀಲ, ಸದಸ್ಯರಾದ ಚಂದ್ರಕಾಂತ ಪೂಜಾರಿ, ಚಂದ್ರಕಲಾ, ಶ್ರೀಕಾಂತ, ಶಿವಲೀಲಾ ಹಿರೇಮಠ, ಶಾಂತಾಬಾಯಿ ಅಂಬಾರಾಯ, ಮಲ್ಲನಗೌಡ ಪೊಲೀಸ್ ಪಾಟೀಲ, ಮುಖಂಡರಾದ ಗುಂಡಪ್ಪ, ವೀರೇಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT