ಕಲಬುರಗಿ: ‘ಕೇಂದ್ರವು ಜಿಎಸ್ಟಿ ಸರಳೀಕರಣದ ಹೆಸರಿನಲ್ಲಿ ರಾಜ್ಯದ ನ್ಯಾಯಯುತ ತೆರಿಗೆ ಪಾಲನ್ನು ನಿರಾಕರಿಸುವ ಮೂಲಕ ಹುನ್ನಾರ ನಡೆಸಿದ್ದು, ಇದರಿಂದ ರಾಜ್ಯಕ್ಕಾಗುವ ₹ 15 ಸಾವಿರ ಕೋಟಿ ನಷ್ಟವನ್ನು ಭರಿಸಿಕೊಡಬೇಕು’ ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ)ದ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ ಒತ್ತಾಯಿಸಿದರು.

ನಗರದಲ್ಲಿ ನಡೆದ ಪಕ್ಷದ ಮೂರು ದಿನಗಳ ರಾಜ್ಯ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯಗಳ ಕುರಿತು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಸರಕು ಮತ್ತು ಸೇವಾ ತೆರಿಗೆ ಜಾರಿಗೆ ಬಂದಾಗಿನಿಂದ ಕೇಂದ್ರವು ರಾಜ್ಯಗಳಿಗೆ ಆಗುತ್ತಿರುವ ನಷ್ಟವನ್ನು ಸಮರ್ಪಕವಾಗಿ ಭರಿಸಿಕೊಡುವಲ್ಲಿ ವಿಫಲವಾಗುತ್ತಿದೆ. ಇದರಿಂದಾಗಿ ರಾಜ್ಯದಲ್ಲಿನ ಕಲ್ಯಾಣ ಯೋಜನೆಗಳ ಅನುಷ್ಠಾನಕ್ಕೆ ಹಿನ್ನಡೆಯಾಗುತ್ತಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿಯವರು ಜಿಎಸ್ಟಿ ಸರಳೀಕರಣದ ಬಗ್ಗೆ ಮಾತನಾಡುತ್ತಿದ್ದಾರೆ. ಅದರಿಂದಾಗುವ ನಷ್ಟವನ್ನು ಭರ್ತಿ ಮಾಡಿಕೊಡಬೇಕು’ ಎಂದರು.

ರಾಜ್ಯದಲ್ಲಿ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಅಸ್ತಿತ್ವಕ್ಕೆ ಬಂದಿದ್ದ ‘ಇಂಡಿಯಾ’ ಮೈತ್ರಿಕೂಟವು ಇದೀಗ ನಿಷ್ಕ್ರಿಯವಾಗಿದ್ದು, ಕೂಡಲೇ ಮೈತ್ರಿಕೂಟವನ್ನು ಬಲಪಡಿಸಿ ಕೋಮುವಾದಿ ಫ್ಯಾಸಿಸ್ಟ್ ಶಕ್ತಿಗಳ ವಿರುದ್ಧ ಹೋರಾಟ ರೂಪಿಸಲು ಮತ್ತು ಮುಂಬರುವ ಚುನಾವಣೆಯಲ್ಲಿ ಮೈತ್ರಿಕೂಟ ಒಂದಾಗಿ ಚುನಾವಣೆ ಎದುರಿಸಲು ಸಮ್ಮೇಳನದಲ್ಲಿ ತೀರ್ಮಾನಿಸಲಾಗಿದೆ. ಸಾರಿಗೆ ನಿಗಮಗಳ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು. ಪ್ರಿಯಾಂಕಾ ಗಾಂಧಿ ಅವರು 6ನೇ ಗ್ಯಾರಂಟಿಯಾಗಿ ಘೋಷಿಸಿದ್ದ ಸ್ಕೀಮ್ ನೌಕರರಿಗೆ ಗೌರವ ಧನ ಹೆಚ್ಚಳದ ಭರವಸೆಯನ್ನು ಈಡೇರಿಸಬೇಕು’ ಎಂದು ಹೇಳಿದರು.

‘ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಈ ಭಾಗದ ಜನತೆಯ ತಲಾದಾಯ ಹೆಚ್ಚಿಸಲು ಸರ್ಕಾರ ಮುಂದಾಗಬೇಕು. ಧರ್ಮಸ್ಥಳದ ಆಡಳಿತ ಮಂಡಳಿಯ ಆಡಳಿತ ಅವ್ಯವಹಾರಗಳ ತನಿಖೆ ನಡೆಸಬೇಕು. ಧರ್ಮಸ್ಥಳ ಮತ್ತು ಅದರ ಸುತ್ತಮುತ್ತ ನಡೆದಿರುವ ಭೂಕಬಳಿಕೆ ಮತ್ತು ಅಸಹಜ ಸಾವುಗಳ ಕುರಿತು ಸರ್ಕಾರ ವಿಶೇಷ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದರು.

ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕೆ.ಎಸ್.ಜನಾರ್ದನ್, ಜಿಲ್ಲಾ ಕಾರ್ಯದರ್ಶಿ ಮಹೇಶಕುಮಾರ ರಾಠೋಡ, ಮುಖಂಡರಾದ ಮೌಲಾ ಮುಲ್ಲಾ, ಭೀಮಾಶಂಕರ ಮಾಡಿಯಾಳ, ಸಿದ್ದಪ್ಪ ಪಾಲ್ಕಿ ಗೋಷ್ಠಿಯಲ್ಲಿದ್ದರು.

ರಾಜ್ಯ ಕಾರ್ಯದರ್ಶಿಯಾಗಿ ಪುನರಾಯ್ಕೆ

ಸಿಪಿಐನ 25ನೇ ರಾಜ್ಯ ಸಮ್ಮೇಳನದಲ್ಲಿ ಹಾಲಿ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ ಹಾಗೂ ಖಜಾಂಚಿಯಾಗಿ ಶಿವರಾಜ್ ಬಿರಾದಾರ ಅವರನ್ನು ಪುನರ್ ಆಯ್ಕೆ ಮಾಡಲಾಯಿತು. 36 ಸದಸ್ಯರುಳ್ಳ ರಾಜ್ಯ ಮಂಡಳಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.