ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅತಿಥಿ ಉಪನ್ಯಾಸಕರಿಗೆ ಪ್ರತಿ ವರ್ಷ ಕೌನ್ಸೆಲಿಂಗ್ ಅಗತ್ಯವಿಲ್ಲ: ಶಿವಾನಂದ ಬಿಳವಾರ

Published : 14 ಆಗಸ್ಟ್ 2024, 5:15 IST
Last Updated : 14 ಆಗಸ್ಟ್ 2024, 5:15 IST
ಫಾಲೋ ಮಾಡಿ
Comments

ಕಲಬುರಗಿ: ರಾಜ್ಯ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರತಿ ವರ್ಷ ಕೌನ್ಸೆಲಿಂಗ್‌ ನಡೆಸಿ ಮಾನಸಿಕ ಕಿರುಕುಳ ನೀಡಲಾಗುತ್ತಿದೆ ಎಂದು ಅತಿಥಿ ಉಪನ್ಯಾಸಕ ಶಿವಾನಂದ ಬಿಳವಾರ ಆರೋಪಿಸಿದ್ದಾರೆ.

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಸರ್ಕಾರದಿಂದ ಯಾವುದೇ ಸ್ಪಷ್ಟತೆ ಸಿಗುತ್ತಿಲ್ಲ. ಪ್ರತಿ ವರ್ಷ ಬೇರೆ– ಬೇರೆ ಕಾಲೇಜು, ತಾಲ್ಲೂಕು ಮತ್ತು ಜಿಲ್ಲೆಗಳಿಗೆ ನಿಯೋಜನೆ ಮಾಡಿ, ಅಲೆದಾಡಿಸಲಾಗುತ್ತಿದೆ. ಹೀಗೆ ಅಲೆದಾಡಿಸುತ್ತಿದ್ದರೆ ಅತಿಥಿ ಉಪನ್ಯಾಸರಕು ನೆಲೆಯೂರುವುದು ಯಾವಾಗ ಎಂಬ ಪ್ರಶ್ನೆ ಕಾಡುತ್ತಿದೆ ಎಂದು ಪ್ರಕಟಣೆಯಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಯುಜಿಸಿ ಮಾನದಂಡಗಳನ್ನು ಪಾಲಿಸಬೇಕು. ಅರ್ಹತೆ ಮತ್ತು ಸೇವಾನುಭವ ಇದ್ದವರೆಗೆ ಕೌನ್ಸೆಲಿಂಗ್ ನಡೆಸಬಾರದು. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಕಾಲೇಜುಗಳಲ್ಲಿಯೇ ಮುಂದುವರಿಸಬೇಕು. ಹೆಚ್ಚುವರಿ ಕಾರ್ಯಾಭಾರಕ್ಕೆ ಮಾತ್ರ ಕೌನ್ಸೆಲಿಂಗ್ ನಡೆಸಬೇಕು ಎಂದು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT