ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ: ಒನಕೆ ಪ್ರದರ್ಶಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ

Published 14 ಡಿಸೆಂಬರ್ 2023, 15:54 IST
Last Updated 14 ಡಿಸೆಂಬರ್ 2023, 15:54 IST
ಅಕ್ಷರ ಗಾತ್ರ

ಕಲಬುರಗಿ: ಸೇವೆ ಕಾಯಂ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಬಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಅನಿರ್ದಿಷ್ಟ ಅವಧಿಯ ಪ್ರತಿಭಟನೆ ಗುರುವಾರ 22ನೇ ದಿನಕ್ಕೆ ಕಾಲಿಟ್ಟಿತು. 

ಒನಕೆ ಹಿಡಿದು ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದ ಅತಿಥಿ ಉಪನ್ಯಾಸಕಿಯರು, ಸರ್ಕಾರ, ಕೆಲ ಪದವಿ ಕಾಲೇಜುಗಳ ಪ್ರಾಂಶುಪಾಲರು, ಕೆಲವು ವಿಭಾಗಗಳ ಮುಖ್ಯಸ್ಥರು ಅತಿಥಿ ಉಪನ್ಯಾಸಕರಿಗೆ ಮಾಡುತ್ತಿರುವ ಅನ್ಯಾಯದ ವಿರುದ್ಧ ಆಕ್ರೋಶ ಹೊರಹಾಕಿದರು.

ಅತಿಥಿ ಉಪನ್ಯಾಸಕರಾದ ಚೇತನಾ, ಪ್ರಣೋತಿ, ಮಮತಾ ಪಾಟೀಲ, ಅವ್ವಮ್ಮ, ರಾಧಿಕಾ, ಶಶಿರೇಖಾ, ಮಿಲನ ಕಾಂಬ್ಳೆ, ಸೀತಾ, ಸಾತಮ್ಮ, ನಾಗವೇಣಿ ಹಿರೇಮಠ, ಅಂಜನಾದೇವಿ, ಚಂದ್ರಕಾಂತ ಶಿರೋಳ್ಳಿ, ಗುರುರಾಜ ಕುಲಕರ್ಣಿ, ಆಂಜನೇಯ, ರಾಘವೇಂದ್ರ ಕುಲಕರ್ಣಿ ಸೇರಿದಂತೆ ಅನೇಕ ಅತಿಥಿ ಉಪನ್ಯಾಸಕರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT