ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಬುರಗಿ: ಅತಿಥಿ ಉಪನ್ಯಾಸಕರಿಂದ ಮುಂದುವರಿದ ಧರಣಿ

Published 25 ನವೆಂಬರ್ 2023, 16:01 IST
Last Updated 25 ನವೆಂಬರ್ 2023, 16:01 IST
ಅಕ್ಷರ ಗಾತ್ರ

ಕಲಬುರಗಿ: ಸೇವೆ ಕಾಯಂಗೊಳಿಸುವಂತೆ ಆಗ್ರಹಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಶನಿವಾರವೂ ಮುಂದುವರಿಯಿತು.

ಜೆಡಿಎಸ್ ರಾಜ್ಯ ಘಟಕದ ಕಾರ್ಯದರ್ಶಿ ಬಸವರಾಜ ಬಿರಬಿಟ್ಟಿ ಧರಣಿಗೆ ಬೆಂಬಲ ವ್ಯಕ್ತಪಡಿಸಿ, ‘ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸುವುದಾಗಿ ಆಶ್ವಾಸನೆ ಕೊಟ್ಟಿದೆ. ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

‘ಸುಮಾರು 15 ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿಯೇ ಸೇವೆ ಸಲ್ಲಿಸುತ್ತಿರುವ ನಮಗೆ ಕನಿಷ್ಠ ಸೇವಾ ಭದ್ರತೆಯೂ ಇಲ್ಲವಾಗಿದೆ. ನಮ್ಮ ಬೇಡಿಕೆಗಳು ಈಡೇರುವವರೆಗೂ ಧರಣಿ ಸತ್ಯಾಗ್ರಹ ಮುಂದುವರಿಯಲಿದೆ’ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿ ಅಧ್ಯಕ್ಷ ಚಂದ್ರಕಾಂತ ಶಿರೋಳಿ ಸ್ಪಷ್ಟಪಡಿಸಿದರು.

ಜೆಡಿಎಸ್ ಮುಖಂಡರಾದ ಮಲ್ಲಿಕಾರ್ಜುನ ಸಂಗಾಣಿ, ನಾಗಣ್ಣ ವಾರದ, ಹೋರಾಟ ಸಮಿತಿ ಪದಾಧಿಕಾರಿಗಳಾದ ಮಮತಾ ಪಾಟೀಲ, ಪರಮೇಶ್ವರ ಬನಸೋಡೆ, ಶರಣಬಸಪ್ಪ ಮೈಸಲಗಿ, ನಾಗೇಂದ್ರ ನಂದಾ, ನಾಗನಗೌಡ, ರಮೇಶ ಕವಡೆ, ಶಾಂತಪ್ಪ ರಾಠೋಡ ಸೇರಿದಂತೆ ಜಿಲ್ಲೆಯ ಅತಿಥಿ ಉಪನ್ಯಾಸಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT