ಭಾನುವಾರ, ನವೆಂಬರ್ 29, 2020
24 °C

ಗುಲಬರ್ಗಾ ವಿಶ್ವವಿದ್ಯಾಲಯ ಘಟಿಕೋತ್ಸವ; ಜಯಶ್ರೀಗೆ 11 ಚಿನ್ನದ ‌ಪದಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ‌11 ಚಿನ್ನದ ಪದಕಗಳನ್ನು ಪಡೆದ ಜಯಶ್ರೀ ಶಿವಶರಣಪ್ಪ ಅವರಿಗೆ ಹಂಗಾಮಿ ಕುಲಪತಿ ಡಾ.ಚಂದ್ರಕಾಂತ ‌ಯಾತನೂರ ಅವರು ಚಿನ್ನದ ಪದಕ ಹಾಗೂ ಪ್ರಮಾಣಪತ್ರವನ್ನು ವಿತರಿಸಿದರು.

ಇದೇ ಸಂದರ್ಭದಲ್ಲಿ ಮಂತ್ರಾಲಯದ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರಿಗೆ ಅನುಪಸ್ಥಿತಿಯಲ್ಲಿ ‌ಗೌರವ ಡಾಕ್ಟರೇಟ್ ನೀಡಲಾಯಿತು.

ವಿಶ್ವವಿದ್ಯಾಲಯದ ಡಾ.ಅಂಬೇಡ್ಕರ್ ‌ಸಭಾಂಗಣದಲ್ಲಿ ನಡೆದ 38ನೇ ಘಟಿಕೋತ್ಸವದಲ್ಲಿ ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ (ಐಸೆಕ್) ನಿರ್ದೇಶಕ ‌ಡಾ.ಎಸ್. ಮಾದೇಶ್ವರನ್ ದಿಕ್ಸೂಚಿ ಭಾಷಣ ಮಾಡಿದರು.

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರು ಆನ್ ಲೈನ್ ಮೂಲಕ ಸಂದೇಶ ನೀಡಿದರು.

ಕುಲಸಚಿವ ಪ್ರೊ.ಸಿ.ಸೋಮಶೇಖರ್, ಮೌಲ್ಯಮಾಪನ ‌ಕುಲಸಚಿವ ಪ್ರೊ. ಸಂಜೀವ ಕುಮಾರ್ ಹಾಗೂ ವಿವಿಧ ನಿಕಾಯಗಳ ಡೀನ್ ಗಳು ಇದ್ದರು.

ಇದನ್ನೂ ಓದಿ: 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು